ಕದಂಬೋತ್ವವದಲ್ಲಿ ರಾಜ್ಯಮಟ್ಟದ ಕುಸ್ತಿ ಸ್ಪರ್ಧೆ : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ

ಕಾರವಾರ : ಮಾರ್ಚ್ 5 ಮತ್ತು 6 ರಂದು ಬನವಾಸಿಯಲ್ಲಿ ನಡೆಯುವ ಕದಂಬೋತ್ಸವದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ಜಿಲ್ಲಾ ಮತ್ತು ರಾಜ್ಯಮಟ್ಟದ ಕುಸ್ತಿ ಸ್ಪರ್ಧೆಗಳನ್ನು ಅಯೋಜಿಸಲಾಗುವುದು ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಮಾರ್ಚ್ 6 ರಂದು ನಡೆಯುವ ಕುಸ್ತಿ ಸ್ಪರ್ಧೆಯಲ್ಲಿ ಭಾಗವಹಿಸಲು ಕ್ರೀಡಾಪಟುಗಳಿಗೆ ಮುಕ್ತ ಅವಕಾಶವಿದ್ದು, ವಿಜೇತ ಕ್ರೀಡಾಪಟುಗಳಿಗೆ ನಗದು ಬಹುಮಾನವನ್ನು ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು.

ರಾಜ್ಯಮಟ್ಟದ ಪುರುಷ ಕುಸ್ತಿ ಸ್ಪರ್ಧೆಯು 65+ ಕೆಜಿಯಿಂದ 80 ಕೆಜಿ ವರೆಗಿನ ದೇಹತೂಕದಲ್ಲಿ ನಡೆಯಲಿದ್ದು, ವಿಜೇತರಿಗೆ ಕದಂಬ ಕೇಸರಿ ಪ್ರಶಸ್ತಿ ಹಾಗೂ ಬೆಳ್ಳಿ ಗದೆ ನೀಡಲಾಗುವುದು. ರಾಜ್ಯಮಟ್ಟದ ಮಹಿಳೆಯರ ಕುಸ್ತಿ ಸ್ಪರ್ಧೆಯು 60+ ಕೆಜಿಯಿಂದ 76 ಕೆಜಿ ವರೆಗಿನ ದೇಹತೂಕದಲ್ಲಿ ನಡೆಯಲಿದ್ದು, ವಿಜೇತರಿಗೆ ಕದಂಬ ಮಹಿಳಾ ಕೇಸರಿ ಪ್ರಶಸ್ತಿ ಹಾಗೂ ಬೆಳ್ಳಿ ಗದೆ ನೀಡಲಾಗುವುದು.

ಜಿಲ್ಲಾ ಮಟ್ಟದ ಕುಸ್ತಿ ಸ್ಪರ್ಧೆಯು 30 ಕೆಜಿ, 40 ಕೆ.ಜಿ. 50 ಕೆಜಿ, 60 ಕೆಜಿ ಮತ್ತು 65 ಕೆ.ಜಿ ವಿಭಾಗದಲ್ಲಿ ಪುರುಷ ಮತ್ತು ಮಹಿಳೆಯರಿಗಾಗಿ ನಡೆಯಲಿದ್ದು, ಪ್ರಥಮ. ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದವರಿಗೆ ನಗದು ಬಹುಮಾನವನ್ನು ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.

ಮಾರ್ಚ್ 6 ರಂದು ಬೆಳಗ್ಗೆ 8 ಗಂಟೆಯಿ0ದ ಕುಸ್ತಿ ಸ್ಪರ್ಧಗಳು ನಡಯಲಿದ್ದು, ಇದಕ್ಕಾಗಿ ಎಲ್ಲಾ ಅಗತ್ಯ ಸಿದ್ದತೆಗಳನ್ನು ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
….

Latest Indian news

Popular Stories