ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತ: ಮರಕ್ಕೆ ಕಾರು ಡಿಕ್ಕಿಯಾಗಿ ಐವರು ದುರ್ಮರಣ, ಮತ್ತಿಬ್ಬರ ಸ್ಥಿತಿ ಗಂಭೀರ

ಆಂಧ್ರಪ್ರದೇಶ್: ಇಂದು ಆಂಧ್ರಪ್ರದೇಶದಲ್ಲಿ ಭೀಕರ ಅಪಘಾತವೊಂದು ಸಂಭವಿಸಿದೆ. ಅದೇ ಚಾಲಕನ ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಐವರು ದುರ್ಮರಣ ಹೊಂದಿರುವಂತ ಘಟನೆ ನಡೆದಿದೆ.

ಆಂಧ್ರಪ್ರದೇಶದ ಮೆಹಬೂಬನಗರ ಜಿಲ್ಲೆಯ ಕೊತಕೋಟೆ ಬೈಪಾಸ್ ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿಯಾಗಿದೆ.

ಈ ಭೀಕರ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದರೇ, ಮಗುವೊಂದು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದೆ.

ಎರಿಟಿಗಾ ಕಾರಿನಲ್ಲಿ ಹೈದರಾಬಾದ್ ಗೆ ಬಳ್ಳಾರಿ ಮೂಲದವರು ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ಕಾರು ಮರಕ್ಕೆ ಡಿಕ್ಕಿಯಾಗಿ ಸಂಭವಿಸಿದಂತ ಅಪಘಾತದಲ್ಲಿ ಮತ್ತಿಬ್ಬರು ಗಾಯಗೊಂಡಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

Latest Indian news

Popular Stories