ಅಂದ್ರಪ್ರದೇಶ :ನೆಲ್ಲೂರು ಜಿಲ್ಲೆಯ ಮುಸನೂರು ಟೋಲ್ ಪ್ಲಾಜಾ ಬಳಿ ಶನಿವಾರ ಬೆಳಗಿನ ಜಾವ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ 7 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಟೂರಿಸ್ಟ್ ಬಸ್ ಹಾಗೂ ಲಾರಿ ನಡುವೆ ಅಪಘಾತ ಸಂಭವಿಸಿದ್ದು, ಘಟನೆಯಲ್ಲಿ 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ. ಪ್ರತ್ಯಕ್ಷದರ್ಶಿಗಳ ಮಾಹಿತಿಗಳ ಪ್ರಕಾರ ಖಾಸಗಿ ಬಸ್ ಚೆನ್ನೈನಿಂದ ಹೈದರಾಬಾದ್ಗೆ ಬರುತ್ತಿತ್ತು.ನೆಲ್ಲೂರು ಬಳಿ ಮೊದಲು ಟ್ರಕ್ವೊಂದು ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.
ಡಿಕ್ಕಿ ರಭಸಕ್ಕೆ ಬಸ್ನಲ್ಲಿದ್ದ ಚಾಲಕ ಸಮೇತ ಏಳು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದರು. ಘಟನೆಯಲ್ಲಿ ಸುಮಾರು 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿಸಿದ್ದಾರೆ.ಸುದ್ದಿ ತಿಳಿಯುತ್ತಿದ್ದಂತೆ ಹೈವೇ ಪೊಲೀಸರು ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯ ಕೈಗೊಂಡರು.