ಮತಗಟ್ಟೆಗಳಲ್ಲಿ ಮೂಲ ಸೌಕರ್ಯ ಪರಿಶೀಲಿಸಿದ ಜಿಲ್ಲಾಧಿಕಾರಿ*

ಕಾರವಾರ : ಲೋಕಸಭಾ ಸಾರ್ವತ್ರಿಕ ಚುನಾವಣಾ ಹಿನ್ನಲೆಯಲ್ಲಿ ಜಿಲ್ಲೆಯ ವಿವಿಧ ಮತಗಟ್ಟೆಗಳಿಗೆ ಸೋಮವಾರ ಭೇಟಿ ನೀಡಿದ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಮತಗಟ್ಟೆಯಲ್ಲಿ ಮತದಾರರಿಗೆ ಸುಗಮ ಮತದಾನಕ್ಕೆ ಅಗತ್ಯವಿರುವ ಎಲ್ಲಾ ಅಗತ್ಯ ಮೂಲಭೂತ ಸೌಕರ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.

ಮತಗಟ್ಟೆಗಳಲ್ಲಿ ಮತದಾರರಿಗೆ ಕುಡಿಯುವ ನೀರಿನ ಸೌಲಭ್ಯ, ನೆರಳಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ, ವಿಕಲ ಚೇತನ ಮತದಾರರಿಗೆ ಡಿಚಿmಠಿ ವ್ಯವಸ್ಥೆ, ವಿದ್ಯುತ್ ಸಂಪರ್ಕ , ಮತದಾರರು ಮತಗಟ್ಟೆಗೆ ಆಗಮಿಸಲು ಮತ್ತು ಮತದಾನದ ನಂತರ ನಿರ್ಗಮಿಸಲು ಸೂಕ್ತ ವ್ಯವಸ್ಥೆ ಗಳನ್ನು ಪರಿಶೀಲಿಸಿದ ಜಿಲ್ಲಾಧಿಕಾರಿಗಳು, ಮತಗಟ್ಟೆಯಲ್ಲಿ ಮತದಾರರಿಗೆ ಯಾವುದೇ ಮೂಲಭೂತ ಸೌಕರ್ಯಗಳ ಕೊರತೆಯಾಗದಂತೆ ಎಚ್ಚರ ವಹಿಸುವುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
…….

Latest Indian news

Popular Stories