ಕಾರವಾರ : ದಾಂಡೇಲಿ ನಾನಾಕೆಸರೋಡಾ ಎಂಬ ಗ್ರಾಮದ ಹತ್ತಿರ ಅರಣ್ಯ ಪ್ರದೇಶದಲ್ಲಿ ವ್ಯಕ್ತಿ ಓರ್ವನ ಮೇಲೆ ಆನೆ ದಾಳಿ ಮಾಡಿದೆ.
ಜಾನುವಾರು ಮೇಯಿಸಲು ಕಾಡಿಗೆ ಹೋಗಿದ್ದ ವೇಳೆ ವ್ಯಕ್ತಿಯ ಮೇಲೆ ಆನೆ ದಾಳಿ ಮಾಡಿದೆ.
ದಾಂಡೇಲಿ ತಾಲೂಕಿನ ನಾನಾಕೆಸರೋಡಾ ಗ್ರಾಮದ ಹತ್ತಿರ ಅರಣ್ಯ ಪ್ರದೇಶದಲ್ಲಿ ಮಹೇಶ ಜಾನು ಪಾಟೀಲ್ ಎಂಬುವವರ ಮೇಲೆ ಈ ದಾಳಿ ನಡೆದಿದೆ. ಗಾಯಗೊಂಡ ವ್ಯಕ್ತಿಗೆ ಸ್ಥಳೀಯ ಸರಕಾರಿ ಆಸ್ಪತ್ರೆಗೆ ದಾಖಲು ಮಾಡಲಾಯಿತು.
ಸ್ಥಳಕ್ಕೆ ಅರಣ್ಯಾಧಿಕಾರಿಗಳ ಭೇಟಿ ನೀಡಿದ್ದಾರೆ. ವ್ಯಕ್ತಿ ಅಪಾಯದಿಂದ ಪಾರಾಗಿದ್ದಾನೆ ಎಂದು ಅರಣ್ಯ ಅಧಿಕಾರಿಗಳು ಹೇಳಿದ್ದಾರೆ