ಉ.ಕ | ಮೀನುಗಾರರು ಕಡಲಿಗೆ ಇಳಿಯಬೇಡಿ : ಜಿಲ್ಲಾಧಿಕಾರಿ ಸೂಚನೆ

ಕಾರವಾರ : ಹವಾಮಾನ ಇಲಾಖೆಯು ನೀಡಿದ ಹವಾಮಾನ ಮುನ್ಸೂಚನೆಯಂತೆ ಮೇ. 18 ರಿಂದ 22 ರ ವರೆಗೆ ಬಂಗಾಲ ಕೊಲ್ಲಿ ಸಮುದ್ರದಲ್ಲಿ ವಾಯು ಭಾರ ಕುಸಿತವಾಗುವ ಸಾಧ್ಯತೆಯ ಹಿನ್ನೆಲೆಯಲ್ಲಿ ಮೀನುಗಾರರು ಕಡಲಿಗೆ ಇಳಿಯದಂತೆ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ಕರ್ನಾಟಕ ಕರಾವಳಿ ಪ್ರದೇಶಾದ್ಯಂತ 40 ಕಿಮೀ ನಿಂದ 55 ಕಿಮೀ ವೇಗದಲ್ಲಿ ಗಾಳಿ ಬೀಸಲಿದ್ದು ಹಾಗೂ ಸಮುದ್ರ ಒರಟಾಗಲಿದೆ. ಮುಂಜಾಗ್ರತ ಕ್ರಮವಾಗಿ ಮೀನುಗಾರಿಕೆ ನಡೆಸಲು ಸಮುದ್ರಕ್ಕೆ ತೆರಳದಂತೆ ಹಾಗೂ ಮೀನುಗಾರಿಕೆಗೆ ತೆರಳಿರುವ ಎಲ್ಲಾ ಮೀನುಗಾರಿಕೆ ದೋಣಿಗಳು( ಬೋಟ್ ಗಳು) ಕೂಡಲೇ ದಡ ಸೇರುವಂತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
……

Latest Indian news

Popular Stories