ಉ.ಕ | ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರ

ಕಾರವಾರ :   ಜಿಲ್ಲೆಯ ಲೋಕಸಭಾ ಕ್ಷೇತ್ರದ ಚುನಾವಣಾ ನಿಮಿತ್ತ  ಕರ್ತವ್ಯಕ್ಕೆ ಹಾಜರಾಗುವ   ಸೇವಾ  ಮತದಾರರಿಗೆ ಉತ್ತರ ಕನ್ನಡ ಜಿಲ್ಲಾಧಿಕಾರಿ ಅವರ ಕಚೇರಿಯಲ್ಲಿ ಅಂಚೆ ಮತದಾನ ಕೇಂದ್ರವನ್ನು ಸ್ಥಾಪಿಸಲಾಗಿದೆ‌ . ಜಿಲ್ಲೆಯಲ್ಲಿ ಈಗಾಗಲೇ ಅಂಚೆ ಮತದಾನಕ್ಕೆ ನೋಂದಾಯಿಸಿಕೊಂಡಿರುವ ಅಗತ್ಯ ಸೇವೆಗಳ ಅಡಿಯಲ್ಲಿನ ಮತದಾರರಿಗೆ ಮೇ 1 ರಿಂದ 3 ರ ವರೆಗೆ ಈ ಕೇಂದ್ರದಲ್ಲಿ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.

ಕರ್ತವ್ಯ ನಿರತ ಸಿಬ್ಬಂದಿಗೆ ಮತದಾನ ಸೌಲಭ್ಯ ಕೇಂದ್ರ :
ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳಿಗೆ ಮತದಾನ ಮಾಡಲು ಅನುಕೂಲವಾಗುವಂತೆ ಚುನಾವಣಾ ಮಾರ್ಗಸೂಚಿಯನ್ವಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸೌಲಭ್ಯ ಕೇಂದ್ರವನ್ನು ಮತ್ತು ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳ ವಿಧಾನಸಭಾ ಕ್ಷೇತ್ರವಾರು ನಡೆಯುವ ತರಬೇತಿ ಕೇಂದ್ರದಲ್ಲಿ ಸೌಲಭ್ಯ ಕೇಂದ್ರವನ್ನು ಸ್ಥಾಪಿಸಲಾಗಿದ್ದು, ಸದ್ರಿ ಮತದಾರರಿಗೆ ಮೇ 2 ರಂದು ಸೌಲಭ್ಯ ಕೇಂದ್ರದಲ್ಲಿ ಹಾಜರಿದ್ದು ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.
…….

Latest Indian news

Popular Stories