ಕಡಲ ಕೊರೆತ ಸ್ಥಳಗಳಿಗೆ ಕೆ.ಎಂ.ಬಿ ಜಯರಾಮ್ ರಾಯ್ ಪುರ ಭೇಟಿ

ಕಾರವಾರ : ಕರಾವಳಿ ಜಿಲ್ಲೆಯಲ್ಲಿ ಕಡಲ ಕೊರತೆ ತೀವ್ರವಾಗಿದ್ದು, ಸಮುದ್ರ ಭಾಗದಲ್ಲಿ ವಾಸಿಸುತ್ತಿರುವ ಜನರಲ್ಲಿ ಆತಂಕ ಮನೆ ಮಾಡಿದೆ. ಕಡಲ ಕೊರೆತ ಸಮಸ್ಯೆಯ ಹಾನಿಗೆ ತಡೆಗಟ್ಟಲು ಸರ್ಕಾರದಿಂದ ಶಾಶ್ವತವಾದ ಪರಿಹಾರ ನೀಡುವ ನಿಟ್ಟಿನಲ್ಲಿ ಯೋಜನೆಯನ್ನು ಅದಷ್ಟು ಬೇಗ ಕಂಡುಕೊಳ್ಳಲಿದೆ ಎಂದು ಕರ್ನಾಟಕ ಜಲಸಾರಿಗೆ ಮಂಡಳಿ ಮುಖ್ಯ ಕಾರ್ಯನಿರ್ವಾಣಾಧಿಕಾರಿ ಜಯರಾಮ್ ರಾಯ್‌ಪುರ ಅವರು ತಿಳಿಸಿದರು.

ಕಾರವಾರ ತಾಲೂಕಿನ ಮಾಜಾಳಿ, ಸದಾಶಿವಗಡ ಮತ್ತು ಹಾರವಾಡದ ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಸ್ಥಳೀಯ ಅಧಿಕಾರಿಗಳಿಗೆ ಇದಕ್ಕೆ ಪರಿಹಾರ ಕಂಡುಕೊಳ್ಳುವಂತೆ ಸಲಹೆ ನೀಡಿದರು.


ಕರಾವಳಿ ದಿನೇ ದಿನೇ ಕಡಲ ಕೊರೆತ ಹೆಚ್ಚಾಗುತ್ತಿರುವ ಕಾರಣ ಕಡಲ ಕೊರೆತ ಸ್ಥಳಗಳಿಗೆ ಭೇಟಿ ನೀಡಿ, ಪರಿಹಾರ ಕಂಡುಕೊಳ್ಳಲು ಮುಂದಾಗಿದ್ದು, ಜೊತೆಗೆ ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಂಡು, ಸ್ಥಳೀಯರಿಗೆ ಅನುಕೂಲಮಾಡಿಕೊಡಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.


ಇದೇ ವೇಳೆ ಕರ್ನಾಟಕ ಜಲಸಾರಿಗೆ ಮಂಡಳಿಯ ನಿರ್ದೇಶಕ ಕ್ಯಾ. ಸಿ. ಸ್ವಾಮಿ, ಕರ್ನಾಟಕ ಜಲಸಾರಿಗೆ ಮಂಡಳಿಯ ಚೀಫ್ ಇಂಜಿನಿಯರ್ ಪ್ರಮೀತ್, ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸಾದ್ ಸೇರಿದಂತೆ ಇತರೆ ಅಧಿಕಾರಿಗಳು ಇದ್ದರು.

Latest Indian news

Popular Stories