
Uttara Kannada
ಉತ್ತರ ಕನ್ನಡ ಲೋಕಸಭಾ ಕ್ಷೇತ್ರ : ಅಂತಿಮ ಕಣದಲ್ಲಿ 13 ಅಭ್ಯರ್ಥಿಗಳು
ಕಾರವಾರ : ಲೋಕಸಭಾ ಚುನಾವಣೆಯ ಉತ್ತರ ಕನ್ನಡ ಕ್ಷೇತ್ರದಿಂದ ನಾಮಪತ್ರ ಹಿಂಪಡೆಯಲು ಕೊನೆಯ ದಿನವಾದ ಸೋಮವಾರ ಯಾವುದೇ ಅಭ್ಯರ್ಥಿಗಳು ತಮ್ಮ ನಾಮಪತ್ರಗಳನ್ನು ಹಿಂಪಡೆಯದ ಕಾರಣ ಮೇ .7 ರಂದು ನಡೆಯುವ ಚುನಾವಣೆಗೆ ಅಂತಿಮ ಕಣದಲ್ಲಿ ಕಾಂಗ್ರೆಸ್ ,ಬಿಜೆಪಿ ಅಭ್ಯರ್ಥಿಗಳು ಸೇರಿ ಒಟ್ಟು 13 ಅಭ್ಯರ್ಥಿಗಳು ಸ್ಪರ್ಧೆಯಲ್ಲಿ ಉಳಿದಿದ್ದಾರೆ.
ಚುನಾವಣಾ ಕಣದಲ್ಲಿರುವ ಅಭ್ಯರ್ಥಿಗಳು ಇಂತಿದ್ದಾರೆ . ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ನ ಡಾ.ಅಂಜಲಿ ನಿಂಬಾಳ್ಕರ್, ಭಾರತೀಯ ಜನತಾ ಪಾರ್ಟಿಯ ವಿಶ್ವೇಶ್ವರ ಹೆಗಡೆ ಕಾಗೇರಿ, ಸೋಷಿಯಲಿಸ್ಟ್ ಯೂನಿಟಿ ಸೆಂಟರ್ ಆಫ್ ಇಂಡಿಯಾ(ಕಮ್ಯುನಿಸ್ಟ್) ಪಕ್ಷದ ಗಣಪತಿ ಹೆಗಡೆ, ಕರ್ನಾಟಕ ರಾಷ್ಟ್ರ ಸಮಿತಿಯ ವಿನಾಯಕ ಮಂಗೇಶ ನಾಯ್ಕ್, ಉತ್ತಮ ಪ್ರಜಾಕೀಯ ಪಕ್ಷದ ಸುನೀಲ್ ಪವಾರ್, ಪಕ್ಷೇತರ ಅಭ್ಯರ್ಥಿಗಳಾದ ಕೃಷ್ಣಾಜಿ ಪಾಟೀಲ್, ಚಿದಾನಂದ ಹನುಮಂತಪ್ಪ ಹರಿಜನ, ನಿರಂಜನ್ ಉದಯಸಿನ್ಹಾ ಸರ್ದೇಸಾಯಿ, ನಾಗರಾಜ ಅನಂತ ಶಿರಾಲಿ, ಅರವಿಂದ ಗೌಡ,ಅವಿನಾಶ್ ನಾರಾಯಣ ಪಾಟೀಲ,ಕೃಷ್ಣ ಹನುಮಂತಪ್ಪ ಬಳೆಗಾರ, ರಾಜಶೇಖರ ಶಂಕರ ಹಿಂಡಲಗಿ ಕಣದಲ್ಲಿ ಉಳಿದಿದ್ದಾರೆ. ಕಾಂಗ್ರೆಸ್ , ಬಿಜೆಪಿ ಮಧ್ಯೆ ನೇರಾ ಹಣಾಹಣಿ ಏರ್ಪಟ್ಟಿದೆ.




