
ಉತ್ತರ ಕನ್ನಡ ಜಿಲ್ಲೆಯಲ್ಲಿ12,07,433 ಮತದಾರರು : ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ
ಕಾರವಾರ : ಉತ್ತರ ಕನ್ನಡ ಜಿಲ್ಲೆಯ ಪರಿಷ್ಕೃತ ಅಂತಿಮ ಮತದಾರರ ಪಟ್ಟಿಯನ್ನು ಜಿಲ್ಲಾಧಿಕಾರಿ ಸೋಮವಾರ ಪ್ರಕಟಿಸಿದರು . ಮತದಾರರ ಅಂತಿಮ ಪಟ್ಟಿಯಲ್ಲಿ ಪ್ರಸ್ತುತ 6,04,466 ಪುರುಷರು ಮತ್ತು 6,02,961 ಮಹಿಳೆಯರು ಹಾಗೂ 6 ಇತರೆ ಸೇರಿದಂತೆ ಒಟ್ಟು 12,07,433 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದರು.
ಅವರು ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಜಿಲ್ಲೆಯ ರಾಜಕೀಯ ಪಕ್ಷದ ಮುಖಂಡರಿಗೆ ಮತದಾರರ ಅಂತಿಮ ಪಟ್ಟಿಯನ್ನು ವಿತರಿಸಿ ಮಾತನಾಡಿದರು.
1 ಜನೇವರಿವ2024 ಅರ್ಹತಾ ದಿನದಂತೆ ಅಂತಿಮ ಮತದಾರರ ಪಟ್ಟಿಯನ್ನು 22 ಜನೇವರಿ 2024 ರಂದು ಜಿಲ್ಲೆಯ ಎಲ್ಲ ಮತದಾರರ ಸಹಾಯಕ ಆಯುಕ್ತರ ಕಚೇರಿ, ತಹಶೀಲ್ದಾರ ಕಚೇರಿ ಹಾಗೂ ಆಯಾ ಮತಗಟ್ಟೆಗಳಲ್ಲಿ ಪ್ರಕಟಿಸಲಾಗಿದೆ. ಮತದಾರರ ಪಟ್ಟಿಯನ್ನು ಪಾರದರ್ಶಕವಾಗಿ ಪ್ರಕಟಿಸಲಾಗಿದ್ದು, ಯಾವುದೇ ಆಕ್ಷೇಪಗಳಿದ್ದರೆ ಫೆಬ್ರವರಿ ಅಂತ್ಯದೊಳಗೆ ಮಾಹಿತಿ ನೀಡುವಂತೆ ಸೂಚಿಸಿದ ಅವರು 27 ಅಕ್ಟೋಬರ್ 2023 ರಂದು ಪ್ರಕಟಿಸಿದ ಕರಡು ಮತದಾರರ ಪಟ್ಟಿಯಲ್ಲಿ ಒಟ್ಟು 11,98,532 ಮತದಾರರಿದ್ದು, ಪ್ರಸ್ತುತ 8,901 ಮತದಾರರ ಸಂಖ್ಯೆ ಹೆಚ್ಚಾಗಿದೆ ಎಂದು ಮಾಹಿತಿ ನೀಡಿದರು.
ಜಿಲ್ಲೆಯ 6 ವಿಧಾನಸಭಾ ಕ್ಷೇತ್ರಗಳಿಗೆ ಸಂಬಂಧಿಸಿದಂತೆ 1,435 ಮತಗಟ್ಟೆಗಳಿಗೆ ಸಂಬಂಧಿಸಿದಂತೆ, ಹಳಿಯಾಳ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,83,036 ಮತದಾರರು ಇದ್ದಾರೆ .
ಕಾರವಾರ ವಿಧಾನಸಭಾ ಕ್ಷೇತ್ರದ 258 ಮತಗಟ್ಟೆಯಲ್ಲಿ 1,09,378 ಪುರುಷ ಮತದಾರರು, 1,12,786 ಮಹಿಳಾ ಮತದಾರರು ಮತ್ತು ಒಬ್ಬ ತೃತೀಯ ಲಿಂಗಿ ಮತದಾರರು ಸೇರಿದಂತೆ ಒಟ್ಟು 2,22,165 ಮತದಾರರು ಇದ್ದಾರೆ ಎಂದು ಜಿಲ್ಲಾಧಿಕಾರಿ ಹೇಳಿದರು.
ಕುಮಟಾ ವಿಧಾನಸಭಾಕ್ಷೇತ್ರದ ಲ್ಲಿ ಒಟ್ಟು 1,89,856 ಮತದಾರರು ಇದ್ದಾರೆ ಎಂದರು.
ಭಟ್ಕಳ ವಿಧಾನಸಭಾ ಕ್ಷೇತ್ರದ ಒಟ್ಟು 2,25,128 ಮತದಾರರು ಇದ್ದಾರೆ.ಶಿರಸಿ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 2,02,648 ಮತದಾರರು ಇದ್ದಾರೆ.ಯಲ್ಲಾಪುರ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 1,84,600 ಮತದಾರರಿದ್ದಾರೆ
ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
….




