ಬಿ.ಎಲ್.ಸಂತೋಷ್ ಭೇಟಿಯಾದ ಮಾಜಿ ಸಚಿವ ವಿ.ಸೋಮಣ್ಣ; ಕುತೂಹಲ ಮೂಡಿಸಿದ ಚರ್ಚೆ

ನವದೆಹಲಿ: ವಿಧಾನಸಭಾ ಚುನಾವಣೆ ಸೋಲಿನ ಬಳಿಕ ಸವಪಕ್ಷ ಬಿಜೆಪಿ ನಾಯಕರ ವಿರುದ್ಧವೇ ಅಸಮಾಧಾನ ವ್ಯಕ್ತಪಡಿಸಿ, ಬಹಿರಂಗವಾಗಿ ಕಿಡಿಕಾರುತ್ತಿದ್ದ ಮಾಜಿ ಸಚಿವ ವಿ.ಸೋಮಣ್ಣ ಇದೀಗ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿದ್ದಾರೆ.

ವರಿಷ್ಠರ ಭೇಟಿಗಾಗಿ ನಿನ್ನೆ ದೆಹಲಿಗೆ ತೆರಳಿರುವ ವಿ.ಸೋಮಣ್ಣ ಇಂದು ಬಿ.ಎಲ್.ಸಂತೋಷ್ ಅವರನ್ನು ಭೇಟಿಯಾಗಿದ್ದು, ಕೆಲ ಕಾಲ ಚರ್ಚೆ ನಡೆಸಿದರು. ಇದೇ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿಗೂ ಸೋಮಣ್ಣ ಸಮಯ ಕೇಳಿದ್ದಾರೆ.

ಇಂದು ಸಂಜೆ ಅಥವಾ ನಾಳೆ ವಿ.ಸೋಮಣ್ಣ ಅಮಿ ಶಾ ಅವರನ್ನು ಭೇಟಿಯಾಗಲಿದ್ದಾರೆ ಎಂದು ತಿಳಿದುಬಂದಿದೆ. ಒಟ್ಟಾರೆ ಅಪಕ್ಷದ ವಿರುದ್ಧವೇ ಸಮಾಧಾನ ಬೆನ್ನಲ್ಲೇ ವಿ.ಸೋಮಣ್ಣ, ಬಿ.ಎಲ್.ಸಂತೋಷ್ ಭೇಟಿ ತೀವ್ರ ಕುತೂಹಲ ಮೂಡಿಸಿದೆ.

Latest Indian news

Popular Stories