ವಿಜಯಪುರ: ಜಿಲ್ಲೆಯಲ್ಲಿ ಮಳೆಯ ಅಬ್ಬರದ ಕಾರಣ ವಿಜಯಪುರ ಜಿಲ್ಲೆಯಲ್ಲಿ ಶಾಲಾ-ಕಾಲೇಜುಗಳಿಗೆ ಗುರುವಾರ ಒಂದು ದಿನದ ಮಟ್ಟಿಗೆ ರಜೆ ಘೋಷಿಸಲಾಗಿದೆ.
ಈ ಕುರಿತು ಅದೇಶ ಹೊರಡಿಸಿರುವ ಜಿಲ್ಲಾಧಿಕಾರಿ ಟಿ. ಭೂಬಾಲನ್, ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಪದವಿ, ಎಂಜಿನಿಯರಿಂಗ್, ವೈದ್ಯಕೀಯ ಸೇರಿದಂತೆ ಉನ್ನತ ಶಿಕ್ಷಣ ಕಾಲೇಜುಗಳಿಗೆ ರಜೆ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.