ವಿಜಯಪುರ: ಬಬಲೇಶ್ವರ ಬಿಜೆಪಿ ಅಭ್ಯರ್ಥಿ ಪುತ್ರನ ವಿರುದ್ಧ ಕೇಸ್ ದಾಖಲಾಗಿದೆ. ವಿಜಯಪುರ ನಗರದ ಬಬಲೇಶ್ವರ ನಾಕಾದ ಬಳಿ ಗಾಳಿಯಲ್ಲಿ ಗುಂಡು ಹಾರಿಸಿರುವ ಹಿನ್ನೆಲೆ ಬಬಲೇಶ್ವರ ಬಿಜೆಪಿ ಅಭ್ಯರ್ಥಿ ವಿಜುಗೌಡ ಪಾಟೀಲ ಪುತ್ರ ಸಮರ್ಥ ಪಾಟೀಲ ವಿರುದ್ಧ ಕೇಸ್ ದಾಖಲಾಗಿದೆ.
ಅಲ್ಲದೇ, ವಿಜುಗೌಡ ಪಾಟೀಲಗೆ ಬಿಜೆಪಿ ಟಿಕೆಟ್ ಘೋಷಣೆ ಆಗಿತ್ತು. ಅದಕ್ಕಾಗಿ ಸಂಭ್ರಮಕ್ಕಾಗಿ ಗಾಳಿಯಲ್ಲಿ ಗುಂಡು ಹಾರಿಸಿದ್ದಾನೆ ಎನ್ನಲಾಗಿದೆ.
ಇನ್ನೂ ಕಾಂಗ್ರೆಸ್ ನಾಯಕರು ಜಂಟಿ ಸುದ್ದಿಗೋಷ್ಠಿ ನಡೆಸಿ ಬಿಜೆಪಿ ವಿರುದ್ಧ ಕಿಡಿಕಾರಿದರು. ಅದಕ್ಕಾಗಿ ಸಮರ್ಥ ವಿರುದ್ಧ ಆರ್ಮ್ಸ್ ಆ್ಯಕ್ಟ್ ಅಡಿಯಲ್ಲಿ ಕೇಸ್ ದಾಖಲಾಗಿದೆ.
ಈ ಕುರಿತು ಗಾಂಧಿಚೌಕ್ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.