ಮಸಬಿನಾಳ ಘಟನೆ: 23ಕ್ಕೂ ಹೆಚ್ಚು ಜನರ ಬಂಧನ

ವಿಜಯಪುರ: ಇವಿಎಂಗಳನ್ನು ಸಾಗಾಟ ಮಾಡಲಾಗುತ್ತದೆ ಎಂಬ ತಪ್ಪು ಕಲ್ಪನೆ ಆಧರಿಸಿ ಗ್ರಾಮಸ್ಥರಿಂದ ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗಳ ಮೇಲೆ ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ 23 ಕ್ಕೂ ಹೆಚ್ಚು ಜನರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಎಚ್.ಡಿ. ಆನಂದಕುಮಾರ ತಿಳಿಸಿದರು.

ಮಸಬಿನಾಳದಲ್ಲಿ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ ನಂತರ ಮಾಧ್ಯಮ ಪ್ರತಿನಿಧೀಗಲಿಗೆ ವಿವರಣೆ ನೀಡಿದ ಅವರು, ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದ್ದು, ದಸ್ತಗೀರಿ ಮಾಡಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು, ಯಾರು ಸಹ ಈ ರೀತಿಯ ಕೃತ್ಯಗಳಿಗೆ ಮುಂದಾಗದಂತೆ ಕಠಿಣ ಎಚ್ಚರಿಕೆ ನೀಡಲಾಗಿದೆ. ಯಾರೇ ಇದ್ದರೂ ಸಹ ಚುನಾವಣಾ ಅಕ್ರಮ, ಶಾಂತಿ ಕದಡಲು ಮುಂದಾದರೆ ಅವರ ಮೇಲೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಇಲಾಖೆ ಸನ್ನದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿವರಿಸಿದರು.

ಇವಿಎಂ ಜಖಂ:
ಮಸಬಿನಾಳದಲ್ಲಿ ನಡೆದ ಈ ಘಟನೆಯಲ್ಲಿ ಸೆಕ್ಟರ್ ಅಧಿಕಾರಿಗೆ ಗಾಯಗಳಾಗಿದ್ದು, ಎರಡು ಕಂಟ್ರೋಲ್ ಯೂನಿಟ್, 2 ಬ್ಯಾಲೇಟ್ ಯೂನಿಟ್, 3 ವಿವಿಪ್ಯಾಟ್‌ಗಳು ಜಖಂಗೊಂಡಿವೆ ಎಂದು ಮಾಹಿತಿ ಲಭ್ಯವಾಗಿದೆ.

Latest Indian news

Popular Stories