ವಿಜಯಪುರ: ಯುವತಿಯ ಮೇಲೆ ಅತ್ಯಾಚಾರವೆಸಗಿ ಮೂವರು ಪರಾರಿಯಾಗಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಕಳೆದ ಜನೆವರಿ 17ರ ತಡರಾತ್ರಿ ಘಟನೆ ನಡೆದಿದೆ. ನಗರದ ಕೇಂದ್ರ ಬಸ್ ನಿಲ್ದಾಣದಲ್ಲಿ ನಿಂತಿದ್ದ ಯುವತಿಯನ್ನು ಪುಸಲಾಯಿಸಿದ ಮೂವರು ಯುವಕರು, ಯುವತಿಯನ್ನು ಸ್ಯಾಟ್‌ಲೈಟ್ ಬಸ್ ನಿಲ್ದಾಣದ ಬಳಿ ನಿರ್ಜನ ಪ್ರದೇಶಕ್ಕೆ ಕರೆದುಕೊಂಡು ಹೋಗಿ ಅತ್ಯಾಚಾರ ಮಾಡಿ ಪರಾರಿಯಾಗಿದ್ದಾರೆ ಎನ್ನಲಾಗಿದೆ.
ಒರ್ವ ಯುವಕ ಅತ್ಯಾಚಾರ ಮಾಡಿದ್ದು, ಇಬ್ಬರು ಅವನಿಗೆ ಸಹಾಯ ಮಾಡಿದ್ದಾರೆ ಎನ್ನಲಾಗಿದೆ. ಅತ್ಯಾಚಾರವೆಸಗಿದ ಕಾಮುಕರು ಯುವತಿಯನ್ನು ಅಲ್ಲಿಯೆ ಬಿಟ್ಟು ಪರಾರಿಯಾಗಿದ್ದಾರೆ.
ಜನವರಿ 18ರ ಬೆಳಗ್ಗೆ ನರಳುತ್ತಿದ್ದ ಮಹಿಳೆಯನ್ನು ಕಂಡ ಸ್ಥಳೀಯರು ಪೊಲೀಸರಿಗೆ ಮಹಿತಿ ನೀಡಿದ್ದಾರೆ. ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಮಾಹಿತಿ ಕಲೆಹಾಕಿ ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಬಳಿಕ ಅತ್ಯಾಚಾರದ ವಿಚಾರ ಬಹಿರಂಗವಾಗಿದೆ.
ತನ್ನ ಮೇಲೆ ಅತ್ಯಾಚಾರ ಆಗಿದೆ ಎಂದು ಯುವತಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಓರ್ವ ಅತ್ಯಾಚಾರ ಮಾಡಿದ್ದು ಇನ್ನಿಬ್ಬರು ಆತನಿಗೆ ಸಹಾಯ ಮಾಡಿದ್ದಾರೆಂದು ಯುವತಿ ಮಾಹಿತಿ ನೀಡಿದ್ದಾಳೆ.
ಯುವತಿಯನ್ನು ಪುಸಲಾಯಿಸಿ ಕರೆದುಕೊಂಡು ಹೋದ ಮೂವರ ಬಂಧನಕ್ಕಾಗಿ ಪೊಲೀಸರು ಶೋಧ ನಡೆಸಿದ್ದಾರೆ. ಅತ್ಯಾಚಾರ ಮಾಡಿದ ಓರ್ವ ಹಾಗೂ ಸಹಾಯ ಮಾಡಿದ ಇಬ್ಬರ ಬಂಧನಕ್ಕೆ ಪೊಲೀಸರು ಜಾಲ ಬೀಸಿದ್ದಾರೆ.
ವಿಜಯಪುರ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.