ವಿಜಯಪುರ: ಅಪರಿಚಿತ ಮಹಿಳೆ ಶವವೊಂದು ವಿಜಯಪುರ ನಗರದ ಆರ್ಟಿಓ ಬಳಿ ಪತ್ತೆಯಾಗಿದೆ.
ಸುಮಾರು 45-50 ವಯಸ್ಸಿನ ಮಹಿಳೆ ಶವ ಪತ್ತೆಯಾಗಿದೆ. ಇದು ಕೊಲೆಯೋ ಅಥವಾ ಸಹಜ ಸಾವೋ ಎನ್ನುವುದು ಪೊಲೀಸ ತನಿಖೆ ಬಳಿಕ ತಿಳಿದು ಬರಬೇಕಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು. ಶವವನ್ನು ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.
ಜಲನಗರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.