ವಿಜಯಪುರ: ವಿಜಯಪುರ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಬಸನಗೌಡ ಮಾಡಗಿ ಪಕ್ಷಕ್ಕೆ ಸಕ್ರಿಯ ಕಾರ್ಯ ಮಾಡುತ್ತಿಲ್ಲ. ಜಿಲ್ಲೆಯ ಜೆಡಿಎಸ್ ಪಕ್ಷದಲ್ಲಿ ಮಹಿಳೆಯರನ್ನು ಕಡೆಗಣಿಸಲಾಗುತ್ತಿದೆ ಎಂದು ಜೆಡಿಎಸ್ ಜಿಲ್ಲಾ ವಕ್ತಾರ ಸ್ನೇಹಲತಾ ಶೆಟ್ಟಿ ಆರೋಪಿಸಿದರು.
ವಿಜಯಪುರ ನಗರದಲ್ಲಿ ರವಿವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ಮೊದಲ ಹಂತ ಪಟ್ಟಿಯಲ್ಲಿ ಜೆಡಿಎಸ್ ಮಹಿಳಾ ಅಭ್ಯರ್ಥಿಗಳಿಗೆ ಟಿಕೆಟ್ ಹಂಚಿಕೆಯಾಗಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಮ್, ಜಿಲ್ಲಾ ಅಧ್ಯಕ್ಷ ಮಾಗಡಿ ವಿರುದ್ಧ ಕಿಡಿಕಾರಿದರು. ಅಲ್ಲದೇ, ಜಿಲ್ಲೆಯ 8 ಮತಕ್ಷೇತ್ರದಲ್ಲಿ ಒಂದು ಟಿಕೆಟ್‌ಅನ್ನು ಮಹಿಳೆಗೆ ನೀಡಬೇಕು ಎಂದು ಒತ್ತಾಯಿಸಿದರು.
ಜಿಲ್ಲಾ ಜೆಡಿಎಸ್ ಪಕ್ಷದಲ್ಲಿ ಮಹಿಳೆಯರಿಗೆ ಜೀರೊ ಸ್ಥಾನ ನೀಡಲಾಗಿದೆ. ಅದಕ್ಕಾಗಿ ಜೆಡಿಎಸ್ ವರಿಷ್ಠ ಎಚ್‌ಡಿ ದೇವಗೌಡ್ರು, ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ, ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಮಹಿಳೆಯರಿಗೆ ಸ್ಥಾನಮಾನ ನೀಡಬೇಕು. ಬರುವ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬರುತ್ತದೆ ಎಂದರು.