ವಿಜಯಪುರ ಬಿಜೆಪಿ ಸಮಾವೇಶದಲ್ಲಿ ಗದ್ದಲ

ವಿಜಯಪುರ : ವಿಜಯಪುರದ ಶ್ರೀ ಗುರು ಸಂಗನಬಸವ ಮಂಗಲ ಕಾರ್ಯಾಲಯದಲ್ಲಿ ನಡೆಯುತ್ತಿದ್ದ ಬಿಜೆಪಿ ಕಾರ್ಯಕರ್ತರ ಸಮಾವೇಶವನ್ನು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಆಗಮಿಸುವವರೆಗೂ ಆರಂಭಿಸಬಾರದು ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಬೆಂಬಲಿಗರು ಪಟ್ಟು ಹಿಡಿದು ವೇದಿಕೆಗೆ ನುಗ್ಗಿದರು.
ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಇತರೆ ಬಿಜೆಪಿ ನಾಯಕರು ಕಾರ್ಯಕ್ರಮ ಉದ್ಘಾಟನೆಗೆ ಮುಂದಾದಾಗ ಯತ್ನಾಳ ವೇದಿಕೆಗೆ ಬರುವ ವರೆಗೂ ಕಾರ್ಯಕ್ರಮ ಉದ್ಘಾಟಿಸಬಾರದು ಎಂದು ಅಡ್ಡಿಪಡಿಸಿದರು.


ಸಭೆಯ ಮುಂಭಾಗದಲ್ಲಿ ನೆರೆದಿದ್ದ ವಿಡಿಎ ಮಾಜಿ ಅಧ್ಯಕ್ಷ ಪರಶುರಾಮಸಿಂಗ್ ರಜಪೂತ್, ಪಾಲಿಕೆ ಸದಸ್ಯರಾದ ಕಿರಣ ಪಾಟೀಲ, ಪ್ರೇಮಾನಂದ ಬಿರಾದಾರ ಮೊದಲಾದವರು ಆಕ್ಷೇಪ ವ್ಯಕ್ತಪಡಿಸಿದರು. ನಗರ ಶಾಸಕರು ಬರುವವರೆಗೂ ಉದ್ಘಾಟನೆ ಮಾಡಬೇಡಿ ಎಂದು ಪಟ್ಟು ಹಿಡಿದು ಅಸಮಾಧಾನ ಹೊರಹಾಕಿದರು. ತಕ್ಷಣವೇ ಯತ್ನಾಳರ ಬೆಂಬಲಿಗರು ಬಿಆರ್‌ಪಿ, ಬಿಆರ್‌ಪಿ ಎಂಬ ಘೋಷಣೆಗಳನ್ನು ಕೂಗಿದರು. ಚುನಾವಣೆಯಲ್ಲಿ ಯತ್ನಾಳ ಅವರಿಗೆ ದ್ರೋಹ ಬಗೆದವರನ್ನು ಸಭೆಯಿಂದ ಹೊರಹಾಕಿ ಎಂದು ಒತ್ತಾಯಿಸಿದರು.
ವೇದಿಕ ಮೇಲೆ ಉಪಸ್ಥಿತರಿದ್ದ ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ, ಮಾಜಿ ಸಚಿವ ಮುರುಗೇಶ ನಿರಾಣಿ ವಿರುದ್ದ ಧಿಕ್ಕಾರ ಹಾಕಿದರು.


ಗದ್ದಲದ ವಾತಾವರಣದಿಂದ ಬೇಸರಗೊಂಡ ಸಂಸದ ರಮೇಶ ಜಿಗಜಿಣಗಿ, ಮಾಜಿ ಸಚಿವ ಮುರುಗೇಶ ನಿರಾಣಿ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ, ವಿಧಾನ ಪರಿಷತ್ ಸದಸ್ಯ ಹನುಮಂತ ನಿರಾಣಿ ಸಭೆಯಿಂದ ಹೊರನಡೆದರು. ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಎಲ್ಲವನ್ನೂ ಮೌನವಾಗಿ ನೋಡುತ್ತಾ ವೇದಿಕೆಯಲ್ಲಿ ಕುಳಿತುಕೊಂಡರು.

ಉದ್ಘಾಟನೆಯಾಗದೇ ಆರಂಭ – ಸಂಪನ್ನ
ವಿಜಯಪುರದ ಸಂಗನಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಬಿಜೆಪಿ ಕಾರ್ಯಕರ್ತರ ಸಮಾವೇಶಕ್ಕೆ ವಿದ್ಯುಕ್ತ ಚಾಲನೆ ದೊರಕಲೇ ಇಲ್ಲ, ಪ್ರಹಸನದಿಂದಾಗಿ ನೇರವಾಗಿ ಭಾಷಣ ನಡೆದು ಸಮಾವೇಶ ಸಂಪನ್ನಗೊAಡಿತು.

Latest Indian news

Popular Stories