ವೈಧ್ಯಕೀಯ ಸಿಬ್ಬಂದಿ ಮೇಲೆ ಹಲ್ಲೆ: ಆರೋಪಿಗೆ ಜೈಲು ಶಿಕ್ಷೆ, 23 ಸಾವಿರ ರೂ. ದಂಡ

ವಿಜಯಪುರ: ವೈದ್ಯಕೀಯ ಸಿಬ್ಬಂದಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ವಿಜಯಪುರ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಇಬ್ಬರು ಆರೋಪಿಗಳಿಗೆ ಒಂದು ತಿಂಗಳು ಜೈಲು ಶಿಕ್ಷೆ ಮತ್ತು 23 ಸಾವಿರ ದಂಡ ವಿಧಿಸಿ ಗುರುವಾರ ಆದೇಶ ಹೊರಡಿಸಿದೆ.

ವಿಜಯಪುರ ನಗರದ ಬಿ.ಎಲ್.ಡಿ‌.ಇ ರಸ್ತೆಯಲ್ಲಿರುವ ಬಿದರಿಯವರ ಅಶ್ವಿನಿ ಆಸ್ಪತ್ರೆಯಲ್ಲಿ 26.07.2018ರಲ್ಲಿ ವೈದ್ಯಕೀಯ ಸಿಬ್ಬಂದಿ ಮೇಲೆ ರಫೀಕ್ ಅಬ್ದುಲ್ ರಜಾಕ್ ಉಮರಾಣಿ ಮತ್ತು ಸೋಹೇಬ್ ಅಕ್ತರ್ ರುಕ್ಮುದ್ದೀನ್ ಗೌರಿ ಎಂಬುವರು ಆಸ್ಪತ್ರೆಯ ನರ್ಸ್ ಬಸವರಾಜ ದುಂಡಪ್ಪ ಝಳಕಿ ಎಂಬುವರ ಮೇಲೆ ಹಲ್ಲೆ ನಡೆದಿದ್ದಾರೆ ಎಂದು ವಿಜಯಪುರ ನಗರದ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಕುರಿತು ವಿಚಾರಣೆ ನಡೆಸಿದ ಪ್ರಧಾನ ಮತ್ತು ಸತ್ರ ಜಿಲ್ಲಾ ನ್ಯಾಯಾಧೀಶ ಶಿವಾಜಿ ಅನಂತ ನಾಲವಾಡೆ ಅವರಿಗೆ ಶಿಕ್ಷೆ ಮತ್ತು ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ.‌

ಸರ್ಕಾರದ ಪರವಾಗಿ ಎಸ್. ಎಚ್. ಹಕೀಂ ವಾದ ಮಂಡಿಸಿದ್ದಾರೆ.

Latest Indian news

Popular Stories