ಮತ ಎಣಿಕೆಗೆ ಜಿಲ್ಲಾಡಳಿತ ಸನ್ನದ್ಧ

ವಿಜಯಪುರ : ನಗರದ ಕಂದಗಲ್ ಹಣಮಂತರಾಯ ರಂಗಮಂದಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಲೋಕಸಭಾ ಚುನಾವಣೆ – 2024ರ ಮತ ಎಣಿಕೆ ಪೂರ್ವ ಸಿದ್ಧತೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಸ್ವತಃ ವಿವಿಪ್ಯಾಟ್‌ನ ಮಾದರಿ ಮತ ಎಣಿಕೆ ಪ್ರಾತ್ಯಕ್ಷಿಕೆಗಳನ್ನು ಜಿಲ್ಲಾಧಿಕಾರಿ ಟಿ. ಭೂಬಾಲನ್ ಪರಿಶೀಲನೆ ನಡೆಸಿದರು. ಮಾದರಿ ವಿವಿಪ್ಯಾಟ್ ನ್ನು ವಿಕ್ಷೀಸಿ ಮತ ಎಣಿಕೆಯ ವಿಧಾನಗಳ ಹಂತಗಳನ್ನು ಪರಿಶೀಲನೆ ಮಾಡಿದರು.

ಮತ ಎಣಿಕೆಗೆ ನಿಗಧಿಪಡಿಸಿರುವ ಸೂಚನೆಗಳ ಕ್ರಮಬದ್ಧತೆಯಲ್ಲಿ ಯಾವುದೇ ರೀತಿಯ ವ್ಯತ್ಯಾಸವಾಗದಂತೆ ನಿಯಮಗಳನ್ನು ಪರಿಪಾಲಿಸಿ, ಅತ್ಯಂತ ವ್ಯವಸ್ಥಿತ ರೀತಿಯಲ್ಲಿ ಮತ ಎಣಿಕೆ ಕಾರ್ಯವನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಟಿ. ಭೂಬಾಲನ್ ತಿಳಿಸಿದರು.

ಮತ ಎಣಿಕೆ ಪ್ರಕ್ರೀಯೆ ಜೂನ್ 4ರಂದು ವಿಜಯಪುರ ಸೈನಿಕ ಶಾಲೆಯಲ್ಲಿ ನಡೆಯಲಿದೆ. ಅಂದು ಬೆಳಗ್ಗೆ 8 ಗಂಟೆಯಿಂದ ಮತ ಎಣಿಕೆ ಪ್ರಕ್ರಿಯೆ ಶುರುವಾಗಲಿದ್ದು, ಮತ ಎಣಿಕೆ ಸಿಬ್ಬಂದಿಗಳು ಉತ್ತಮ ರೀತಿಯಲ್ಲಿ ತರಬೇತಿಯನ್ನು ಪಡೆದುಕೊಂಡು ಮತ ಎಣಿಕೆ ಕಾರ್ಯದಲ್ಲಿ ಲೋಪದೋಷಗಳು ಆಗದಂತೆ ನೋಡಿಕೊಳ್ಳಿ ಎಂದು ನಿರ್ದೇಶನ ನೀಡಿದರು.

ಅಂದು ಬೆಳಗ್ಗೆ 7 ಗಂಟೆಯ ಒಳಗೆ ತಮಗೆ ನಿಗದಿ ಪಡಿಸಿದ ಮತ ಎಣಿಕೆ ಹಾಲ್‌ನಲ್ಲಿ ಹಾಜರಿರಬೇಕು. ಮತ ಎಣಿಕೆ ಹಾಲ್ ಒಳಗಡೆ ಮೊಬೈಲ್ ನ್ನು ನಿಷೇಧಿಸಲಾಗಿದೆ. ಮತ ಎಣಿಕೆ ಹಾಲ್ ಒಳಗಡೆ ಪೊಲೀಸ್, ಸೆಕ್ಯುರಿಟಿ ಸಿಬ್ಬಂದಿಗಳಿಗೆ ಅನಾವಶ್ಯಕವಾದ ಪ್ರವೇಶವಿರುವುದಿಲ್ಲ. ಅಭ್ಯರ್ಥಿಗಳಲ್ಲದ ಸಚಿವರು, ರಾಜ್ಯ ಸಚಿವರು, ಕೇಂದ್ರ ಸಚಿವರಿಗೆ ಮತ ಎಣಿಕೆ ಹಾಲ್ ಒಳಗಡೆ ಪ್ರವೇಶ ಇರುವುದಿಲ್ಲ ಈ ಕುರಿತು ತಿಳಿದಿರಲಿ ಎಂದು ಹೇಳಿದರು.

ಮತ ಎಣಿಕೆ ಪ್ರಾರಂಬವಾಗುವ ಮೊದಲು ವಿವಿಪ್ಯಾಟ್ ಆನ್ ಮಾಡುವುದು, ರಿಸಲ್ಟ್ ಬಟನ್ ಪ್ರೆಸ್ ಮಾಡುವುದು ಹಾಗೂ ಅದನ್ನು ಕ್ಲೋಸ್ ಮಾಡುವಾಗ ಬಹು ಎಚ್ಚರಿಕೆಯಿಂದ ತಮಗೆ ವಹಿಸಿದ ಮಾರ್ಗಸೂಚಿಗಳಂತೆ ಕಾರ್ಯನಿರ್ವಹಿಸಬೇಕು. ಮತ ಎಣಿಕೆಗೆ ಸಂಬಂಧಿಸಿದಂತ ನಿಯೋಜನೆಗೊಂಡ ಏಜೆಂಟ್‌ರ ಬಳಿ ಶಾಂತವಾಗಿ ವರ್ತಿಸಿ, ಅವರಿಗೆ ಏನಾದರೂ ಸಂಶಯಗಳಿದ್ದರೆ ಅವುಗಳನ್ನು ಪರಿಹರಿಸಿರಿ.

ಪ್ರತಿ ಇವಿಎಂ ಗಳಲ್ಲಿ ಎಣಿಕೆಯಾದ ತಕ್ಷಣ ನಿಖರವಾಗಿ ಅಂಕಿ ಅಂಶಗಳನ್ನು ಬರೆದುಕೊಳ್ಳಬೇಕು. ಇಂದಿನ ತರಬೇತಿ ಅವಧಿಯಲ್ಲಿ ಸ್ಪಷ್ಟವಾದ ಮಾಹಿತಿ ಹಾಗೂ ಮಾರ್ಗದರ್ಶನವನ್ನು ಪಡೆದುಕೊಳ್ಳಿ, ಏಕೆಂದರೆ ಮತ ಎಣಿಕೆ ಮೇಲ್ವೀಚಾರಕರ ಜವಾಬ್ದಾರಿ ಬಹು ಮುಖ್ಯವಾಗಿದೆ ಎಂದರು.

ಮಾಸ್ಟರ್ ಟ್ರೇನರ್ ಡಾ.ಅಶೋಕ ಲಿಮಕರ ತರಬೇತಿಗೆ ಆಗಮಿಸಿದ ಸಿಬ್ಬಂದಿಗಳಿಗೆ ಮತ ಎಣಿಕೆ ಪ್ರಕ್ರಿಯೆಯಲ್ಲಿ ಅನುಸರಿಸಬಹುದಾದ ನಿಯಮಗಳ ಬಗ್ಗೆ ಮಾಹಿತಿ ನೀಡಿದರ. ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಶಂಕರಗೌಡ ಸೋಮನಾಳ ಅವರು ತರಬೇತಿಗೆ ಆಗಮಿಸಿದ ಸಿಬ್ಬಂದಿಗೆ ಮತ ಎಣಿಕೆಯ ಪ್ರಕ್ರಿಯೆಗಳ ಬಗ್ಗೆ ಇವಿಎಂ ಮಶೀನ್ ಹಾಗೂ ವಿವಿಪ್ಯಾಟ್ ಗಳ ಕಾರ್ಯ ವೈಖರಿ, ಅದನ್ನು ಬಳಸುವ ವಿಧಾನಗಳ ಬಗ್ಗೆ ಪ್ರಾತ್ಯಕ್ಷಿಕೆ ನೀಡಿದರು.

Latest Indian news

Popular Stories