ವಿಕಲಚೇತನರ ಕ್ಷೇತ್ರದಲ್ಲಿನ ಸೇವೆ: ಡಾ. ಕುಶಾಲ್ ದಾಸ್ ರಿಗೆ ರಾಜ್ಯ ಮಟ್ಟದ ಪ್ರಶಸ್ತಿ

ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಪಾಟೀಲ ವೈದ್ಯಕೀಯ ಕಾಲೇಜಿನ ಫಿಜಿಯಾಲಜಿ ವಿಭಾಗದ ಡಿಸ್ಟಿಂಗ್ವಿಷ್ಡ್ ಚೇರ್ ಪ್ರೊಫೆಸರ್ ಡಾ. ಕುಶಾಲ ಕೆ. ದಾಸ್ ಅವರಿಗೆ ರಾಜ್ಯ ಸರಕಾರ ವಿಕಲಚೇತನರ ಕ್ಷೇತ್ರದಲ್ಲಿನ ಸೇವೆಗಾಗಿ ರಾಜ್ಯ ಮಟ್ಟದ ವೈಯಕ್ತಿಕ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಿದೆ.
ಡಿಸೆಂಬರ್ 3 ರಂದು ವಿಶ್ವ ವಿಕಲಚೇತನರ ದಿನದಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

ನಾನಾ ಕ್ಷೇತ್ರಗಳಲ್ಲಿ ವಿಶಿಷ್ಠವಾದ ಸೇವೆ ಸಲ್ಲಿಸಿದ ವಿಕಲಚೇತನ ವ್ಯಕ್ತಿ/ವಿಕಲಚೇತನರ ಕ್ಷೇತ್ರದಲ್ಲಿ ವಿಶಿಷ್ಠ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ ವೈಯಕ್ತಿಕ ವಿಭಾಗದಡಿ ರಾಜ್ಯ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ಈ ಪ್ರಶಸ್ತಿ ಪ್ರಧಾನ ಮಾಡಲಾಗುವುದು.

ಡಾ. ಕುಶಾಲ್ ಕೆ. ದಾಸ್ ಅವರು ಪ್ರಶಸ್ತಿಗೆ ಆಯ್ಕೆಯಾಗಿರುವುದಕ್ಕೆ ಬಿ.ಎಲ್.ಡಿ.ಇ ಸಂಸ್ಥೆಯ ಅಧ್ಯಕ್ಷ ಮತ್ತು ಸಚಿವ ಎಂ. ಬಿ. ಪಾಟೀಲ ಅಭಿನಂದನೆ ಸಲ್ಲಿಸಿದ್ದಾರೆ.

Latest Indian news

Popular Stories