ವಿಜಯಪುರ :ಟೈರ್ ಸ್ಫೋಟಗೊಂಡು ಬಸ್ ನಲ್ಲಿ ಬೆಂಕಿ, ಪ್ರಯಾಣಿಕರು ಅದೃಷ್ಟವಶಾತ್ ಪಾರು

*ಬಸ್ ಟೈರ್ ಸ್ಪೋಟ: ಹೊತ್ತಿ ಉರಿದ ಬಸ್*

ವಿಜಯಪುರ: ಬಸ್ ನ ಟೈರ್ ಸ್ಪೋಟಗೊಂಡು ಇಡೀ ಬಸ್ ಹೊತ್ತಿ ಉರಿದಿರುವ ಘಟನೆ ವಿಜಯಪುರದ ಹಿಟ್ಟಿನಹಳ್ಳಿ ಗ್ರಾಮದ ಬಳಿ ನಡೆದಿದೆ.

ಗ್ರಾಮದ ಬಳಿ ಹಾದು ಹೋಗಿರುವ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ಘಟನೆ ನಡೆದಿದ್ದು, ಅದೃಷ್ಠಾವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿಯಾಗಿಲ್ಲ. ಇನ್ನು ಬೆಂಗಳೂರಿನಿಂದ ವಿಜಯಪುರಕ್ಕೆ ಹೋರಟಿದ್ದ ಜನತಾ ಟ್ರಾವೆಲ್ಸ್ ನ ಬಸ್ ಹೊತ್ತಿ ಉರಿದಿದೆ.

ವಿಜಯಪುರದ ಕಡೆಗೆ ತೆರಳಿವಾಗ ಬಸ್ ನ ಟೈರ್ ಸ್ಪೋಟಿಸಿದೆ. ಚಾಲಕನ ಸಮಯಪ್ರಜ್ಞೆಯಿಂದ ಕೂಡಲೇ ಪ್ರಯಾಣಿಕರನ್ನು ಬಸ್ ನಿಂದ ಕೆಳಗಿಳಿಸಿದ್ದಾರೆ. ಇದಾದ ಕೆಲವೇ ಕ್ಷಣಗಳಲ್ಲಿ ಬಸ್ ಗೆ ಬೆಂಕಿ ಹೊತ್ತಿಕೊಂಡಿದೆ ಇದರಿಂದ ಇಡೀ ಬಸ್ ಸುಟ್ಟುಹೋಗಿದೆ.

ಸ್ಥಳಕ್ಕೆ ಅಗ್ನಿಶಾಮಕದಳ ಬಂದು ಬೆಂಕಿ ನಂದಿಸಿದ್ದಾರೆ. ವಿಜಯಪುರ ಗ್ರಾಮಾಣತಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories