ಜಿಗಜಿಣಗಿ ಮತ್ತೆ ಆಸ್ಪತ್ರೆಗೆ ದಾಖಲು

ವಿಜಯಪುರ; ಸಂಸದ ರಮೇಶ ಜಿಗಜಿಣಗಿ ಅನಾರೋಗ್ಯದ ಕಾರಣ ಬೆಳಗಾವಿಯ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.

ಶನಿವಾರ ಬೆಳಗಾವಿ ಜಿಲ್ಲೆಯಲ್ಲಿ ಆಯೋಜಿಸಿದ್ದ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮರಳುವಾಗ ಆರೋಗ್ಯದಲ್ಲಿ ಏರುಪೇರಾದ ಕಾರಣ ಬೆಳಗಾವಿಯ ಕೆ.ಎಲ್.ಇ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಇಲ್ಲಿನ ವೈದ್ಯರು ಚಿಕಿತ್ಸೆ ನಡೆಸಿದ್ದು, ಸದ್ಯ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದ್ದು, ಅಪಾಯದಿಂದ ಪಾರಾಗಿದ್ದಾರೆ ಎಂದು ಸಂಸದರ ಆಪ್ತಬಳಗ ತಿಳಿಸಿದೆ.

ಈ ಹಿಂದೆ ಜ.28 ಬೆಳಗಾವಿಗೆ ಹೋಗುವಾಗ ಬಾಗಲಕೋಟೆ ಜಿಲ್ಲೆಯ ಬೀಳಗಿ ಹತ್ತಿರ ಎದೆನೋವು ಕಾಣಿಸಿಕೊಂಡ ಕಾರಣ ಬಾಗಲಕೋಟೆಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚೇತರಿಸಿಕೊಂಡಿದ್ದರು.

Latest Indian news

Popular Stories