ವಿಜಯಪುರ: ಜಿಲ್ಲೆಯ ಆಲಮಟ್ಟಿ ಅಣೆಕಟ್ಟೆಯಲ್ಲಿ ಕೃಷ್ಣೆಯ ಜಲಧಿಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜಂಟಿಯಾಗಿ ಶನಿವಾರ ಗಂಗಾ ಪೂಜೆ ಮತ್ತು ಬಾಗಿನ ಅರ್ಪಿಸಿದರು.
ಉತ್ತರ ಕರ್ನಾಟಕದ ಜೀವ ನದಿ ಎಂದೆ ಪ್ರಖ್ಯಾತವಾದ ಕೃಷ್ಣಾ ನದಿಯು, ಉತ್ತರ ಕರ್ನಾಟಕದ ಜನರ ಜೀವನವನ್ನು ಸಮೃದ್ಧಿಗೊಳಿಸಲಿ ಎಂದು ಅವರು ಹಾರೈಸಿದರು.
ಈ ಸಂದರ್ಭ ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಬೃಹತ್ ಹಾಗೂ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಖಾತೆಯ ಸಚಿವರು ಹಾಗೂ ವಿಜಯಪುರ ಜಿಲ್ಲೆಯ ಉಸ್ತುವಾರಿ ಸಚಿವರಾದ ಎಂ.ಬಿ.ಪಾಟೀಲ,ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ, ಜವಳಿ, ಕಬ್ಬು ಅಭಿವೃದ್ಧಿ,ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ, ನವದೆಹಲಿಯಲ್ಲಿನ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-2 ಪ್ರಕಾಶ ಹುಕ್ಕೇರಿ ಸೇರಿದಂತೆ ವಿಜಯಪುರ ಹಾಗೂ ಬಾಗಲಕೋಟ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.