Vijayapura

ಕೆಲಸಕ್ಕೆ ಬಾರದವರು ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ: ಡಿಕೆಶಿ ಬಣಕ್ಕೆ ಸಚಿವ ಎಚ್.ಸಿ.ಮಹಾದೇವಪ್ಪ ಟಾಂಗ್

ಸಮಿಯುಲ್ಲಾ ಉಸ್ತಾದ (ದಿ ಹಿಂದುಸ್ತಾನ್ ಗಝೆಟ್ ಪ್ರತಿನಿಧಿ)

ವಿಜಯಪುರ: ಕಾಂಗ್ರೆಸ್ಸು ಒಂದೇ ಬಣ, ಸಿಎಂ ಹುದ್ದೆ ಖಾಲಿ ಇಲ್ಲ, ಕೆಲ್ಸಕ್ಕೆ ಬಾರದವರು ಸಿಎಂ ಬದಲಾವಣೆ ಬಗ್ಗೆ ಚರ್ಚೆ ಮಾಡುತ್ತಿದ್ದಾರೆ ಎಂದು ಸಚಿವ ಎಚ್ ಸಿ ಮಹಾದೇವಪ್ಪ ಡಿಕೆಶಿ ಬಣದ ಶಾಸಕರರಿಗೆ ಟಾಂಗ್ ನೀಡಿದರು.

ವಿಜಯಪುರ ಜಿಲ್ಲೆಯ ಹಳಗುಣಕಿ ಗ್ರಾಮದಲ್ಲಿ ಸಿಎಂ ಸಿದ್ದು, ಡಿಸಿಎಂ ಡಿಕೆಶಿ ಬಣದ ಮಧ್ಯೆ ಸಿಎಂ ಹುದ್ದೆಗೆ ಗುದ್ದಾಟ ತಾರಕಕ್ಕೇರಿರುವ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಮುಖ್ಯಮಂತ್ರಿ ಹುದ್ದೆಯಲ್ಲಿ ಸಿದ್ದರಾಮಯ್ಯ ಅವರು ಕೆಲಸ ಮಾಡುತ್ತಿದ್ದಾರೆ. ಕೆಲಸಕ್ಕೆ ಬಾರದವರು ಅವರನ್ನು ಬದಲಾಯಿಸುವ ಕುರಿತು ಮಾತನಾಡುತ್ತಿದ್ದಾರೆ ಎಂದರು.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Back to top button