ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ : ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವು!

ವಿಜಯಪುರ : ವಿಜಯಪುರದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪಾದಚಾರಿಗಳಿಗೆ ಬೈಕ್ ಡಿಕ್ಕಿಯಾಗಿ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಿಜಯಪುರ ಜಿಲ್ಲೆ ಮುದ್ದೇಬಿಹಾಳ ತಾಲೂಕಿನ ಕುಂಟೋಜಿಯಲ್ಲಿ ಪಾದಚಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಬೈಕ್ ಸವಾರ, ಹಿಂಬದಿ ಸವಾರ, ರಸ್ತೆ ಬದಿ ನಿಂತಿದ್ದ ಇಬ್ಬರು ಸಾವನ್ನಪ್ಪಿದ್ದಾರೆ.

ಮೃತರನ್ನು ತಾಳಿಕೋಟೆ ತಾಲೂಕಿನ ಗೋಟಖಂಡಕಿ ನಿವಾಸಿ ನಿಂಗರಾಜ ಚೌದರಿ(32), ದೇವರಹಿಪ್ಪರಗಿ ತಾಲೂಕಿನ ಹಂಚಲಿ ನಿವಾಸಿ ಅನಿಲ್ ಖೈನೂರ (23) ಮಲಗಲದಿನ್ನಿ ಗ್ರಾಮದ ನಿವಾಸಿ ಉದಯಕುಮಾರ ಪ್ಯಾಟಿ(19) ಎಂದು ಗುರುತಿಸಲಾಗಿದೆ. ಗಾಯಗೊಂಡಿದ್ದ ಮತ್ತೊಬ್ಬ ಯುವಕ ರಾಯಪ್ಪ ಕೂಡ ಸಾವನ್ನಪ್ಪಿದ್ದಾನೆ. ಘಟನೆ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories