ನಿನ್ನೆ ಕಾಣೆಯಾಗಿದ್ದ ಮೂವರು ಮಕ್ಕಳು ಇಂದು ಶವವಾಗಿ ಪತ್ತೆ

ವಿಜಯಪುರ: ನಿನ್ನೆ ಮನೆಯಿಂದ ಕಾಣೆಯಾಗಿದ್ದ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ವಿಜಯಪುರ ನಗರದ ಇಂಡಿ ರಸ್ತೆಯಲ್ಲಿರೋ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಿನಲ್ಲಿ ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ.
ವಿಜಯಪುರ ನಗರದ ಚಾಬುಕ್ ಸವಾರ್ ದರ್ಗಾ ಬಳಿಯ ಮನೆಯಿಂದ ಮೂವರು ಮಕ್ಕಳು ಕಾಣೆಯಾಗಿದ್ದರು. ನಿನ್ನೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ವಿಜಯಪುರದ ಚಾಬುಕಸಾವಾರ್ ದರ್ಗಾದ ಬಳಿಯ ಮನೆಯ ಮುಂದೆ ಒಂಟೆ ಸವಾರಿಯನ್ನು ಮಕ್ಕಳು ಮಾಡಿದ್ದರು ನಂತರ ಒಂಟೆಗಳನ್ನು ಹುಡುಕಿಕೊಂಡು ಮನೆಯಿಂದ ಹೋಗಿದ್ದರು ಎನ್ನಲಾಗಿದೆ.

ಗದಗ ಮೂಲದ ಅನುಷ್ಕಾ ಅನೀಲ ದಹಿಂಡೆ (9), ವಿಜಯ ಅನಿಳ ದಹಿಂಡೆ (7), ವಿಜಯಪುರ ಮೂಲದ ಮಿಹಿರ್ ಶ್ರೀಕಾಂತ ಜಾನಗೌಳಿ (7) ಮೃತ ಬಾಲಕರು ಹಾಗೂ ಬಾಲಕಿಯಾಗಿದ್ದಾರೆ. ಗದಗ ಮೂಲದ ಅನುಷ್ಕಾ ಹಾಗೂ ವಿಜಯ ಬೇಸಿಗೆ ರಜೆಗಾಗಿ ವಿಜಯಪುರದಲ್ಲಿರೋ ಮಾವನ ಮನೆಗೆ ಬಂದಿದ್ದರು.

ಇನ್ನು ಮಕ್ಕಳು ಮನೆಯಿಂದ ಅಚೆ ಹೋಗುವ ವಿಡಿಯೋ ಕೆಲ ಸಿಸಿ ಕೆಮೆರಾದಲ್ಲಿ ದಾಖಲಾಗಿತ್ತು. ನಿನ್ನೆ ಬಹಳ ಸಮಯವಾದರೂ ಮನೆಗೆ ಮಕ್ಕಳು ಬಾರದ ಕಾರರಣ ಮನೆಯವರು ಹುಟುಕಾಟ ನಡೆಸಿ ನಂತರ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಮಕ್ಕಳು ಕಾಣೆಯಾಗಿರುವ ಕುರಿತು ದೂರು ದಾಖಲಿಸಿದ್ದರು.

ನಿನ್ನೆಯಿಂದಲೇ ಕುಟುಂಬಸ್ಥರು ಪೊಲೀಸರು ಮಕ್ಕಳಿಗಾಗಿ ಹುಡುಕಾಟ ನಡೆಸಿದ್ದರು ಆದರೆ ಇಂದು ಮದ್ಯಾಹ್ನದ ವೇಳೆ ಯುಜಿಡಿ ತ್ಯಾಜ್ಯದ ನೀರಿನ ಸಂಸ್ಕರಣಾ ಘಟಕದ ನೀರಲ್ಲಿ ಮೂವರು ಮಕ್ಕಳು ಶವವಾಗಿ ಪತ್ತೆಯಾಗಿದ್ದಾರೆ. ಮಕ್ಕಳ ಶವಗಳನ್ನು ಕಂಡು ಪೋಷಕರ ರೋಧನ ಮುಗಿಲು ಮುಟ್ಟಿದೆ.

ಯುಜಿಸಿ ತ್ಯಾಜ್ಯ ಜಲದ ಸಂಸ್ಕರಣಾ ಘಟಕದಲ್ಲಿ ಸುರಕ್ಷತಾ ಕ್ರಮಗಳನ್ನು ತೆಗೆದುಕೊಂಡಿಲ್ಲ, ತ್ಯಾಜ್ಯ ಘಟಕಕ್ಕೆ ತಡೆ ಗೋಡೆ ಅಥವಾ ಬೇಲಿ ಹಾಕಿಲ್ಲಾ ಹೀಗಾಗಿ ಮೂವರು ಮಕ್ಕಳು ತ್ಯಾಜ್ಯ ಜಲದ ಘಟಕದ ಕಂದಕದಲ್ಲಿರೋ ನೀರಲ್ಲಿ ಮುಳುಗಿ ಮೃತಪಟ್ಟಿವೆ ಎಂದು ಆರೋಪಿಸಿರುವ ಕುಟುಂಬಸ್ಥರು. ಮೂವರು ಮಕ್ಕಳ ಸಾವಿಗೆ ಮಹಾನಗರ ಪಾಲಿಕೆಯ ಆಧಿಕಾರಿಗಳು, ಸಿಬ್ಬಂದಿಗಳು ಕಾರಣವೆಂದು ಆರೋಪಿಸಿದ್ದಾರೆ.
ಎಪಿಎಂಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಪೋಷಕರಿಂದ ಪ್ರತಿಭಟನೆ:
ಮೂವರು ಮಕ್ಕಳ ಸಾವಿಗೆ ಮಹಾನಗರ ಪಾಲಿಕೆ ಅಧಿಕಾರಿಗಳ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿ ಮೃತ ಮಕ್ಕಳ ಪೋಷಕರು ಯುಜಿಡಿ ತ್ಯಾಜ್ಯ ನೀರಿನ ಸಂಸ್ಕರಣಾ ಘಟಕದ ಬಳಿಯ ರಸ್ತೆ ತಡೆದು ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರೊಂದಿಗೆ ವಾಗ್ವಾದವು ನಡೆಯಿತು.

ಮಕ್ಕಳ ಶವಗಳನ್ನ ಕೊಂಡೊಯ್ಯಲು ಬಿಡದೇ ಯುಜಿಡಿ ತ್ಯಾಜ್ಯ ನೀರು ಸಂಸ್ಕರಣಾ ಘಟಕದ ಎದುರು ಪೋಷಕರ ಪ್ರತಿಭಟನೆ ನಡೆಸಿದರು. ಸಂಸ್ಕರಣಾ ಘಟಕಕ್ಕೆ ಸೆಕ್ಯೂರಿಟಿ ಇಲ್ಲದೆ ಇರೋದಕ್ಕೆ ಈ ದುರಂತ ಸಂಭವಿಸಿದೆ ಎಂದು ಆರೋಪಿಸಿ ಮಕ್ಕಳ ಸಾವಿಗೆ ನ್ಯಾಯ ನೀಡಬೇಕೆಂದು ಆಗ್ರಹಿಸಿದರು.

Latest Indian news

Popular Stories