ಸಿಎಂ ಕಾರ್ಯಕ್ರಮದಿಂದ ವಾಪಸ್ಸಾಗುತ್ತಿದ್ದಾಗ ವೀಣಾ ಕಾಶಪ್ಪನವರ ಕಾರು ಅಪಘಾತ

ವಿಜಯಪುರ : ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಭಾಗಿಯಾಗಿದ್ದ ಅಖಿಲ ಭಾರತ 70 ನೇ ಸಹಕಾರ ಸಪ್ತಾಹ ಸಮಾರೋಪ ಸಮಾರಂಭದಲ್ಲಿ ಪಾಲ್ಗೊಂಡು ವಾಪಾಸ್ಸಾಗುತ್ತಿದ್ದ ವೇಳೆಯಲ್ಲಿ ಬಾಗಲಕೋಟೆ ಜಿ.ಪಂ. ಮಾಜಿ ಅಧ್ಯಕ್ಷೆ ವೀಣಾ ಕಾಶಪ್ಪನವರ ಕಾರು ಅಪಘಾತಕ್ಕೀಡಾಗಿದೆ. ಘಟನೆಯಿಂದಾಗಿ ವೀಣಾ ಕಾಶಪ್ಪನವರ ಹಾಗೂ ಕಾರನಲ್ಲಿದ್ದ ಓರ್ವ ವ್ಯಕ್ತಿಗೆ ಗಾಯಗಳಾಗಿವೆ.

IMG 20231120 WA0062 Vijayapura

IMG 20231120 WA0060 Vijayapura

ವಿಜಯಪುರ ನಗರದ ಸಿಂದಗಿ ಬೈಪಾಸ್ ಬಳಿ ಈ ಅಫಘಾತ ನಡೆದಿದ್ದು, ಬೈಕ್ಗೆ ಡಿಕ್ಕಿ ತಪ್ಪಿಸಲು ಹೋಗಿ ಮುಂದಿನ ಕಾರ್ಗೆ ಡಿಕ್ಕಿ ಹೊಡೆದ ಪರಿಣಾಮ ಈ ಅಫಘಾತ ಸಂಭವಿಸಿದೆ. ಗಾಯಗೊಂಡಿರುವ ವೀಣಾ ಅವರನ್ನು ವಿಜಯಪುರ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Latest Indian news

Popular Stories