ಗಾಂಜಾ ಬೆಳೆದ ಆರೋಪಿತನಿಗೆ 5 ವರ್ಷ ಕಠಿಣ ಶಿಕ್ಷೆ, 50 ಸಾವಿರ ರೂ. ದಂಡ

ವಿಜಯಪುರ: ಅಕ್ರಮವಾಗಿ ಗಾಂಜಾ ಬೆಳೆದ ಆರೋಪದ ಮೇಲೆ ತಿಕೋಟಾ ಪೋಲಿಸ್ ಠಾಣಾ ವ್ಯಾಪ್ತಿಯ ಜಾಲಗೇರಿ ವಿಠ್ಠಲವಾಡಿ ಗ್ರಾಮದ ಆರೋಪಿತನಾದ ಕಾಶಿನಾಥ ತಂ.ಅರ್ಜುನ ರಾಠೋಡನಿಗೆ 5 ವರ್ಷ ಕಠಿಣ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿ ನ್ಯಾಯಾಲಯ ತೀರ್ಪು ನಿಡಿದೆ.


ಆರೋಪಿತ ಕಾಶೀನಾಥ ರಾಠೋಡ ತನ್ನ ಜಮೀನಿನಲ್ಲಿ ಪರವಾನಿಗೆ ಇಲ್ಲದೇ ಅಕ್ರಮವಾಗಿ ಗಾಂಜಾ ಬೆಳೆದಿರುವುದನ್ನು ತಿಕೋಟಾ ಪೋಲಿಸರು ದಾಳಿ ಮಾಡಿ ಗಾಂಜಾ ಗಿಡಗಳನ್ನು ಜಪ್ತಿ ಮಾಡಿಕೊಂಡು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಾಲವಾಡೆ ಅವರು ವಿಚಾರಣೆ ನಡೆಸಿ, ಆರೋಪ ಸಾಬೀತಾದ ಹಿನ್ನಲೆಯಲ್ಲಿ ಕಠಿಣ ಶಿಕ್ಷೆ ಹಾಗೂ ದಂಡ ವಿಧಿಸಿ ಆ.23ರಂದು ತೀರ್ಪು ನೀಡಿದ್ದಾರೆ.
ತಿಕೋಟಾ ಪೋಲಿಸ್ ಠಾಣೆಯ ಶ್ರೀಮತಿ ಎಸ್.ಕೆ.ಲಂಗೋಟಿ ಅವರು ಈ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಿದ್ದರು. ಸರ್ಕಾರದ ಪರವಾಗಿ ಪ್ರಧಾನ ಸರ್ಕಾರಿ ಅಭಿಯೋಜಕರಾದ ಎಸ್.ಎಚ್.ಹಕೀಮ ಅವರು ವಾದ ಮಂಡಿಸಿದ್ದರು ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Latest Indian news

Popular Stories