ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ: ಮಾಜಿ ಸಿಎಂ ಬೊಮ್ಮಾಯಿ

ವಿಜಯಪುರ : ಗ್ಯಾರಂಟಿ ಮೂಲಕ ಜನರಿಗೆ ಮೋಸ ಮಾಡಿ, ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ ಜನಪರ ಆಡಳಿತ ನೀಡಲು ಸಾಧ್ಯವೇ ಇಲ್ಲ, ಡಿಸೈಲ್ ಇಲ್ಲದೇ ಬಸ್‌ಗಳು ನಿಲ್ಲುವುದು ಗ್ಯಾರಂಟಿ, ವಿದ್ಯುತ್ ಕ್ಷಾಮ, ನೀರಿನ ಕ್ಷಾಮ ರಾಜ್ಯದಲ್ಲಿ ತಲೆದೂರುವುದು ನಿಶ್ಚಿತ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಾಗ್ದಾಳಿ ನಡೆಸಿದರು.

IMG 20230626 WA0039 Vijayapura


ವಿಜಯಪುರದ ಶ್ರೀ ಗುರು ಸಂಗನಬಸವ ಮಂಗಲ ಕಾರ್ಯಾಲಯದಲ್ಲಿ ನಡೆದ ಭಾರತೀಯ ಜನತಾ ಪಕ್ಷದ ಜಿಲ್ಲಾ ಮಟ್ಟದ ಕಾರ್ಯಕರ್ತರ ಸಭೆಗೆ ವಿದ್ಯುಕ್ತವಾಗಿ ಚಾಲನೆ ನೀಡಿ ಮಾತನಾಡಿದ ಅವರು, ಈ ಗ್ಯಾರಂಟಿ, ಆ ಗ್ಯಾರಂಟಿ ಎಂದು ಹೇಳಿ ನೀರಾವರಿಯ ವಿಷಯವನ್ನೇ ಡೈವರ್ಟ್ ಮಾಡುತ್ತಿದ್ದಾರೆ, ವಿಜಯಪುರ ಜಿಲ್ಲೆಗೆ ಬೇಕಾದ ನೀರಾವರಿ ಯೋಜನೆಗಳಿಗೆ ಅನುದಾನ ಒದಗಿಸುತ್ತಿಲ್ಲ, ಮುಂದೊAದು ದಿನ ನೀರಿಗೂ ಸಹ ದುಸ್ತರ ಬರುವಂತಹ ವಾತಾವರಣವನ್ನು ಕಾಂಗ್ರೆಸ್ ಸರ್ಕಾರ ಸೃಷ್ಟಿಸಿದೆ ಎಂದರು.


ಗುತ್ತಿ ಬಸವಣ್ಣ ಯೋಜನೆ ಅನುಷ್ಠಾನ ಮಾಡುವಾಗ ಅನೇಕ ವಿಘ್ನ ಎದುರಾದವು, ನೀವು ಜೈಲಿಗೆ ಹೋಗಬೇಕಾಗುತ್ತದೆ ಎಂದು ಅನೇಕರು ಹೆದರಿಸದರು, ಆದರೆ ವಿಜಯಪುರ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಲು ನಾನು ಜೈಲಿಗೆ ಹೋಗಲು ಸಿದ್ಧ, ನೇಣಿಗೆ ಏರಲು ಸಿದ್ಧ ಎಂದು ಗುತ್ತಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ಮುಂದಾದೆ ಎಂದು ಸ್ಮರಿಸಿಕೊಂಡರು.


ರೈತರು ಕಳೆದುಕೊಂಡ ಭೂಮಿಗೆ ದರವನ್ನು ನಂತರ ಬಂದ ಕಾಂಗ್ರೆಸ್ ಸರ್ಕಾರ ನಿಗದಿಪಡಿಸಲಿಲ್ಲ, ಏಕರೂಪದ ದರವನ್ನು ರೈತರಿಗೆ ನೀಡಲೇ ಇಲ್ಲ, ಈ ಏಕರೂಪದ ದರವನ್ನು ನೀಡಲು ಪುನ: ನಮ್ಮ ಸರ್ಕಾರವೇ ಬರಬೇಕಾಯಿತು,


ಆರು ಸಾವಿರ ಕೀ.ಮೀ. ರಾಷ್ಟಿçÃಯ ಹೆದ್ದಾರಿ ನಿರ್ಮಾಣ, ಹಲವಾರು ವಿಮಾನ ನಿಲ್ದಾಣಗಳಿಗೆ ಅನುಮತಿ ನೀಡಿದ ಕೀರ್ತಿ ನಮ್ಮ ಕೇಂದ್ರ ಸರ್ಕಾರಕ್ಕೆ ಸಲ್ಲುತ್ತದೆ ಎಂದರು. ವಿಜಯಪುರ ನಗರದಲ್ಲಿ ವಿಮಾನ ನಿಲ್ದಾಣ ನಿರ್ಮಿಸಿದ್ದು ನಮ್ಮ ಸರ್ಕಾರ, ಈಗ ಕಾಂಗ್ರೆಸ್‌ನವರು ಈ ವಿಮಾನ ನಿಲ್ದಾಣವನ್ನೇ ರಿಬ್ಬನ್ ಕತ್ತರಿಸಿ ತಮ್ಮ ಸಾಧನೆ ಎಂದು ಹೇಳಿಕೊಳ್ಳಬಹುದು,


ಕಾಂಗ್ರೆಸ್ ಪಕ್ಷವನ್ನು ವಿರೋಧ ಮಾಡಿಕೊಂಡ ಬಂದ ಜಿಲ್ಲೆ, ಇತಿಹಾಸದ ಪುಟಗಳನ್ನು ತೆರೆದು ನೋಡಿದಾಗ ಇಡೀ ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತ ಅಸ್ತಿತ್ವಕ್ಕೆ ಬಂದಾಗ ಅಖಂಡ ವಿಜಯಪುರ ಜಿಲ್ಲೆಯ 15 ಸ್ಥಾನಗಳಲ್ಲಿ 12 ಸ್ಥಾನಗಳನ್ನು ಬಿಜೆಪಿ ಶಾಸಕರು ಆಯ್ಕೆಯಾಗಿದ್ದರು. ಬಹುಮನಿಯಿಂದ ಹಿಡಿದು ಬ್ರಿಟಿಷ ಆಡಳಿತದವರೆಗೆ ಈ ಭಾಗಕ್ಕೆ ದೊಡ್ಡ ಅನ್ಯಾಯವಾಗುತ್ತಲೇ ಬಂದಿತ್ತು ಎಂದರು.


ಗುಳೇ ತಪ್ಪಿಸುವುದಕ್ಕಾಗಿ ನೀರಾವರಿ ಮಾಡಿಕೊಡಿ ಎಂಬ ಬೇಡಿಕೆ ಮಾತ್ರ ಇರಿಸಿದ್ದರು. ಬರದ ಜಿಲ್ಲೆಯಾದರೂ ಸಹ ದಿ.ಇಂದಿರಾ ಗಾಂಧೀ ಹಾಗೂ ನಿಜಲಿಂಗಪ್ಪ ಅವರನ್ನು ಬಂಗಾರದಿAದ ತೂಗಿದ ಜಿಲ್ಲೆ, ಆದರೆ ಜನತೆಯ ನ್ಯಾಯಯುತವಾದ ಬೇಡಿಕೆ ಯುಕೆಪಿ ಅನುಷ್ಠಾನವಾಗಲೇ ಇಲ್ಲ, ಹೀಗಾಗಿ ನ್ಯಾಯಯುತ ಕೂಗಿಗೆ ಕಾಂಗ್ರೆಸ್ ಪಕ್ಷದಿಂದ ಸ್ಪಂದನೆ ದೊರಕದ ಸಿಟ್ಟು ವಿಜಯಪುರ ಜಿಲ್ಲೆಯಲ್ಲಿ ಇಂದಿಗೂ ಇದೆ ಎಂದರು.
ಗುತ್ತಿ ಬಸವಣ್ಣ ಯೋಜನೆ ಅನುಷ್ಠಾನ ಮಾಡುವಾಗ ಅನೇಕ ವಿಘ್ನ ಎದುರಾದವು, ನೀವು ಜೈಲಿಗೆ ಹೋಗಬೇಕಾಗುತ್ತದೆ ಎಂದು ಅನೇಕರು ಹೆದರಿಸದರು, ಆದರೆ ವಿಜಯಪುರ ಜಿಲ್ಲೆಯ ಜನತೆಗೆ ನ್ಯಾಯ ಒದಗಿಸಲು ನಾನು ಜೈಲಿಗೆ ಹೋಗಲು ಸಿದ್ಧ, ನೇಣಿಗೆ ಏರಲು ಸಿದ್ಧ ಎಂದು ಗುತ್ತಿ ಬಸವಣ್ಣ ಯೋಜನೆ ಅನುಷ್ಠಾನಕ್ಕೆ ಮುಂದಾದೆ ಎಂದು ಸ್ಮರಿಸಿಕೊಂಡರು.


ರೈತರು ಕಳೆದುಕೊಂಡ ಭೂಮಿಗೆ ದರವನ್ನು ನಂತರ ಬಂದ ಕಾಂಗ್ರೆಸ್ ಸರ್ಕಾರ ನಿಗದಿಪಡಿಸಲಿಲ್ಲ, ಏಕರೂಪದ ದರವನ್ನು ರೈತರಿಗೆ ನೀಡಲೇ ಇಲ್ಲ, ಈ ಏಕರೂಪದ ದರವನ್ನು ನೀಡಲು ಪುನ: ನಮ್ಮ ಸರ್ಕಾರವೇ ಬರಬೇಕಾಯಿತು.


ಮುಂಬರುವ ಲೋಕಸಭೆ ಚುನಾವಣೆಯಲ್ಲಿ ರಾಜ್ಯದ ಎಲ್ಲ ಕ್ಷೇತ್ರದಲ್ಲಿಯೂ ಬಿಜೆಪಿ ಗೆಲ್ಲಲಿದೆ, ನಾವು ಸೋಲಿಸಬೇಕಾಗಿರುವುದು ಕಾಂಗ್ರೆಸ್ ಅಭ್ಯರ್ಥಿಗಳನ್ನು, ಅದು ಮಾತ್ರ ಕಾರ್ಯಕರ್ತರು ಲಕ್ಷö್ಯದಲ್ಲಿರಿಸಿಕೊಳ್ಳಬೇಕು ಎಂದರು.

ಸ್ಮಾರ್ಟ್ ಸಿಟಿಯಾಗಲು ಯತ್ನಾಳರ ಕ್ರೀಯಾಶೀಲತೆ ಕಾರಣ
ವಿಜಯಪುರ ನಗರ ಸ್ಮಾರ್ಟ್ ಸಿಟಿಯಾಗಿ ಬೆಳೆಯುತ್ತಿದೆ, ಇದು ಸಾಧ್ಯವಾಗಿದ್ದು ನೀವು ಈ ಕ್ಷೇತ್ರದಿಂದ ಆಯ್ಕೆ ಮಾಡಿ ಕಳುಹಿಸಿದ ಕ್ರೀಯಾಶೀಲ, ದೂರದೃಷ್ಟಿ ಇರುವ ನಾಯಕ ಬಸನಗೌಡ ಪಾಟೀಲ ಯತ್ನಾಳ ಅವರಿಂದ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಯತ್ನಾಳರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ನಾನು ಪ್ರತಿನಿಧಿಸುವ ನನ್ನ ಕ್ಷೇತ್ರ ಹಿಂದುಳಿದಿದೆ, ಇದಕ್ಕೆ ಬೆಂಬಲ ಕೊಡಬೇಕು ಎಂದು ಅನೇಕ ಬಾರಿ ನನ್ನನ್ನು ಭೇಟಿ ಮಾಡಿ ಮನವಿ ಮಾಡಿಕೊಂಡರು, ಸರ್ಕಾರದಿಂದ ಅನುದಾನ ತಂದು ಅದನ್ನು ಕಾರ್ಯಗತಗೊಳಿಸಿ ವಿಜಯಪುರ ನಗರವನ್ನು ಪ್ರಗತಿಗೊಳಿಸಿದರು, ಯಾರು ಅಭಿವೃದ್ಧಿ ಮಾಡಿದ್ದಾರೋ ಅವರ ಹೆಸರನ್ನು ನಾನು ಹೇಳಲೇಬೇಕು ಎಂದರು.


ಈ ವೇಳೆ ಎ.ಎಸ್. ಪಾಟೀಲ ನಡಹಳ್ಳಿ ಅವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಲು ಬೊಮ್ಮಾಯಿ ಮುಂದಾದಾಗ ಯತ್ನಾಳ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಲು ಅಣಿಯಾದಾಗ ಸಮಾಧಾನ ಪಡಿಸಿದ ಬೊಮ್ಮಾಯಿ, ರಾಜಕಾರಣದಲ್ಲಿ ಎಲ್ಲವನ್ನೂ ಸಹಿಸಿಕೊಂಡು ಹೋಗಬೇಕು, ನಾವು ಏನು ಮಾಡಿದ್ದೇವೆ ಎಂಬುದು ನಮ್ಮ ಆತ್ಮಸಾಕ್ಷಿಗೆ ಗೊತ್ತಿದರೆ ಸಾಕು ಎಂದರು.


ಈ ಹಿಂದೆಯೂ ಸಹ ಜಗಳಗಳಾಗಿವೆ, ಜಗಳ ಆದ ಮೇಲೆ ಮತ್ತೆ ಕೂಡುತ್ತಾರೆ, ಮುಂದಿನ ಸಭೆಯಲ್ಲಿ ಎಲ್ಲರೂ ಒಂದಾಗುತ್ತೇವೆ, ಒಂದೇ ಸ್ಟೇಜ್‌ನಲ್ಲಿ ಎಲ್ಲರನ್ನು ಒಂದುಗೂಡಿಸಿ ಬೃಹತ್ ಸಮಾವೇಶವನ್ನು ಸಂಘಟಿಸುವೆ, ಎಲ್ಲವನ್ನು ಒಗ್ಗೂಡಿಸುವೆ ಎಂದು ಒಗ್ಗಟ್ಟಿನ ಮಂತ್ರವನ್ನು ಜಪಿಸಿದರು.


ಮಾಜಿ ಸಚಿವೆ ಶಶಿಕಲಾ ಜೊಲ್ಲೆ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಸ್. ಪಾಟೀಲ ಕುಚಬಾಳ ಮಾತನಾಡಿದರು. ಸಂಸದರಾದ ರಮೇಶ ಜಿಗಜಿಣಗಿ, ಅಣ್ಣಾಸಾಹೇಬ ಜೊಲ್ಲೆ, ಮಾಜಿ ಸಚಿವರಾದ ಮುರುಗೇಶ ನಿರಾಣಿ, ಎಸ್.ಕೆ. ಬೆಳ್ಳುಬ್ಬಿ, ವಿಧಾನ ಪರಿಷತ್ ಸದಸ್ಯರಾದ ಛಲವಾದಿ ನಾರಾಯಣಸ್ವಾಮಿ, ಹಣಮಂತ ನಿರಾಣಿ, ಮಾಜಿ ಶಾಸಕರಾದ ಅಭಯ ಪಾಟೀಲ, ರಮೇಶ ಭೂಸನೂರ, ಸೋಮನಗೌಡ ಪಾಟೀಲ ಸಾಸನೂರ, ಎ.ಎಸ್. ಪಾಟೀಲ ನಡಹಳ್ಳಿ, ಅರುಣ ಶಹಾಪೂರ, ಕರ್ನಾಟಕ ಸಾವಯವ ಬೀಜ ಪ್ರಮಾಣನ ಸಂಸ್ಥೆ ಮಾಜಿ ಅಧ್ಯಕ್ಷ ವಿಜುಗೌಡ ಪಾಟೀಲ, ಲಿಂಬೆ ಅಭಿವೃದ್ಧಿ ಮಂಡಳಿ ಮಾಜಿ ಅಧ್ಯಕ್ಷ ಚಂದ್ರಶೇಖರ ಕವಟಗಿ, ಪಾಲಿಕೆ ಸದಸ್ಯರಾದ ಶಿವರುದ್ರ ಬಾಗಲಕೋಟ, ಮಳುಗೌಡ ಪಾಟೀಲ, ಪ್ರಕಾಶ ಅಕ್ಕಲಕೋಟ, ಎಂ.ಸಿ. ಜಯಪ್ರಕಾಶ, ಕಾಸುಗೌಡ ಬಿರಾದಾರ, ಮೊದಲಾದವರು ಪಾಲ್ಗೊಂಡಿದ್ದರು.


ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಜೋಗೂರ ಕಾರ್ಯಕ್ರಮ ನಿರೂಪಿಸಿದರು.

ಶಾಸಕ ಯತ್ನಾಳ ಗೈರು
ಬಾಗಲಕೋಟೆಯಲ್ಲಿ ನಡೆದ ಕಾರ್ಯಕರ್ತರ ಸಮಾವೇಶದಲ್ಲಿ ಭಾಗವಹಿಸಿ ಬಿರುಸಿನ ವಾಗ್ದಾಳಿ ನಡೆಸಿದ್ದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ವಿಜಯಪುರದಲ್ಲಿ ನಡೆದ ಸಮಾವೇಶದಲ್ಲಿ ಗೈರಾಗಿದ್ದು ತೀವ್ರ ಕುತೂಹಲ ಕೆರಳಿಸಿದೆ.

Latest Indian news

Popular Stories