ವಿಜಯಪುರ: ರಾಜ್ಯದಲ್ಲಿ ಕಾನೂನು ಸೂವ್ಯವಸ್ಥೆ ಹದಗೆಟ್ಟಿದೆ: ಸಂಜಯ್ ಪಾಟೀಲ

ವಿಜಯಪರ : ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಜನರಿಗೆ ಸುಳ್ಳು ಭರವಸೆ ನೀಡಿ ಅಧಿಕಾರಕ್ಕೆ ಬಂದಿದ್ದು, ರಾಜ್ಯದಲ್ಲಿ ಜೈನ ಮುನಿಗಳ ಹತ್ಯೆ, ಟಿ. ನರಸೀಪುರದಲ್ಲಿ ಹಿಂದೂ ಕಾರ್ಯಕರ್ತ ಹತ್ಯೆ ಅಲ್ಲದೇ ಇಂದು ಬೆಂಗಳೂರಿನಲ್ಲಿ ಇಬ್ಬರ ಹತ್ಯೆಯಾಗಿದ್ದು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದೆ ಎಂದು ಬಿಜೆಪಿ ರಾಜ್ಯ ರೈತ ಮೋರ್ಚಾ ಕಾರ್ಯದರ್ಶಿ ಸಂಜಯ್ ಪಾಟೀಲ ಕನಮಡಿ ಆಕ್ರೋಶ ವ್ಯಕ್ತಿಪಡಿಸಿದರು.


ನಗರದ ಬಿಜೆಪಿ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ ಶಾಶ್ವತ ಹಿಂದೂಳಿದ ವರ್ಗ, ಶೋಷಿತ ವರ್ಗ ಯಾವುದಾದರು ಇದ್ದರೆ ಅದು ರೈತ ವರ್ಗವೇ ಆಗಿದೆ. ರೈತರ ಹೊಟ್ಟೆಯ ಮೇಲೆ ಹೊಡೆಯುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ರೈತರೇ ಬಿದಿಗಿಳಿದು ಉಗ್ರ ಹೋರಾಟ ಮಾಡುವ ಕಾಲ ಸನ್ನಿಹಿತವಾಗಿದೆ. ಬಿಜೆಪಿ ಪಕ್ಷ ರೈತರ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಿ ರೈತರ ಬೆನ್ನಿಗೆ ನಿಲ್ಲಲಿದೆ ಎಂದು ಹೇಳಿದರು.


ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಜನಪರ ಯೋಜನೆಗಳಿಗೆ ಕೊಕ್ಕೆ ಹಾಕಿದೆ. ರೈತಪರವಾಗಿರುವ ಎಪಿಎಂಸಿ ಕಾಯ್ದೆ, ರೈತ ವಿದ್ಯಾನಿಧಿ, ರೈತಶಕ್ತಿ ಯೋಜನೆ, ಕಿಸಾನ್ ಸಮ್ಮಾನ, ಭೂ ಸಿರಿ ಯೋಜನೆಗಳಂತಹ ಮಹತ್ವದ ಹಾಗೂ ರೈತರಿಗೆ ನೇರವಾಗುವ ಯೋಜನೆಗಳಿಗೆ ಕತ್ತರಿ ಹಾಕಿರುವುದನ್ನು ನಾವು ಜನರ ಮುಂದೆ ತೆಗೆದುಕೊಂಡು ಹೋಗುತ್ತೇವೆ. ಸದಾ ರೈತ ಪರವಾಗಿದೆ ಎಂದು ಹೇಳುವ ಕಾಂಗ್ರೆಸ್ ನಾಯಕರು ರೈತರ ಯೋಜನೆಗಳನ್ನು ತೆಗೆದು ಹಾಕಿ ರೈತರಿಗೆ ಅನ್ಯಾಯ ಮಾಡುತ್ತೀದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಆರ್.ಎಎಸ್.ಪಾಟೀಲ ಕೂಚಬಾಳ ಮಾತನಾಡಿ, ಕಾಂಗ್ರೆಸ್ ಪಕ್ಷ ಗ್ಯಾರಂಟಿ ಯೋಜನೆಯಾದ ಗೃಹ ಜ್ಯೋತಿ ಜಾರಿಗೋಳಿಸಿದೆ. 200 ಯುನಿಟ್ ಉಚಿತ ವಿದ್ಯುತ್ ಎಂದು ಹೇಳಿ ಅವುಗಳಿಗೆ ಷರತ್ತು ಹಾಕುತ್ತಿರುವಿದು ಅಲ್ಲದೇ ವಿದ್ಯುತ್ ಬಿಲ್ ಹೆಚ್ಚಿಸಿ ಜನರಿಗೆ ಮೋಸ ಮಾಡುತ್ತೀದೆ ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಒಂದು ಕೈಯಲ್ಲಿ ಯೋಜನೆ ನೀಡಿ ಮತ್ತೊಂದು ಕಡೆಗೆ ಕಸಿದುಕೊಳ್ಳುವ ಕೆಲಸ ಮಾಡುತ್ತಿದೆ. ರಾಜ್ಯದಲ್ಲಿ ವಿವಿಧ ಕಡೆಗೆ ಹತ್ಯೆಗಳು ಆಗುತ್ತಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಇಲ್ಲದಂತೆ ಆಗಿದೆ. ಅದಕ್ಕಾಗಿ ಜೈನ ಮುನಿಗಳ ಹತ್ಯೆಯನ್ನು ಸಿಬಿಐ ತನಿಖೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.
ಬಿಜೆಪಿ ವಿರುದ್ಧ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ರಾಜ್ಯಾದ್ಯಂತ ವಿವಿಧ ಇಲಾಖೆಯಲ್ಲಿ ವರ್ಗಾವಣೆ ದಂಧೆ ಮೂಲಕ ವ್ಯಾಪಕ ಭ್ರಷ್ಟಾಚಾರ ನಡೆಸುತ್ತಿದೆ ಎಂದು ಗಂಭೀರ ಆರೋಪ ಮಾಡಿದರು.
ಕಾಂಗ್ರೆಸ್ ಸರ್ಕಾರ 8 ಕ್ಕೂ ಹೆಚ್ಚು ಕಾಯ್ದೆಗಳನ್ನು ರದ್ದು ಮಾಡಿದೆ. ಇದರ ಹಿಂದೆ ರೈತ ವಿರುದ್ಧ ದೊಡ್ಡ ಷಡ್ಯಂತ್ರ ನಡೆಯುತ್ತಿದೆ ಸರ್ಕಾರ ಕೂಡಲೇ ರದ್ದು ಮಾಡಿರುವ ಎಲ್ಲ ಕಾಯ್ದೆಯನ್ನು ಮರುಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮುಖಂಡ ಚಂದ್ರಶೇಖರ್ ಕೌಟಗಿ, ಕಾಸುಗೌಡ ಬಿರಾದಾರ, ಮಹಾನಗರ ಪಾಲಿಕೆ ಸದಸ್ಯ ಶಿವರುದ್ರಪ್ಪ ಬಾಗಲಕೋಟ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಸವರಾಜ ಬಿರಾದಾರ, ಜಿಲ್ಲಾ ಮಾಧ್ಯಮ ಪ್ರಮುಖ ವಿಜಯ ಜೋಶಿ ಉಪಸ್ಥಿತರಿದ್ದರು.

Latest Indian news

Popular Stories