ವಿಜಯಪುರ: ಕಾಂಗ್ರೆಸ್ ಸರ್ಕಾರದಿಂದ ರೈತ ವಿರೋಧಿ ನೀತಿ ಅನುಸರಿಸಲಾಗುತ್ತಿದೆ ಎಂದು ಆರೋಪಿಸಿ ಬಿಜೆಪಿ ಸಿಂದಗಿ ಮಂಡಳದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.
ರೈತ ವಿರೋಧಿ ಕಾಂಗ್ರೆಸ್ ಸರ್ಕಾರದ ನಿಲುವು ವಿರೋಧಿಸಿ ಮಾಜಿ ಶಾಸಕ ರಮೇಶ ಭೂಸನೂರ ಹಾಗೂ ಮುಖಂಡರು ಎತ್ತಿನಗಾಡಿಗಳೊಂದಿಗೆ ಆಗಿಮಿಸಿದ ಸಿಂದಗಿ ತಹಶೀಲ್ದಾರ್ ಕಚೇರಿ ಬಳಿ ಪ್ರತಿಭಟನೆ ನಡೆಸಿದರು.
ಇನ್ನು ಕಾಂಗ್ರೆಸ್ ಸರ್ಕಾರ ರೈತರಿಗೆ ಮೋಸ ಮಾಡುತ್ತಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಕಾಂಗ್ರೆಸ್ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.
ರೈತರಿಗೆ ಸರಿಯಾಗಿ ವಿದ್ಯುತ್ ನೀಡುತ್ತಿಲ್ಲಾ, ಸಾಲಬಾಧೆಯಿಂದ ರೈತರು ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ, ರೈತರ ವಿರೋಧಿ ನೀತಿಯನ್ನು ಸರ್ಕಾರ ಅನುಸರಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.