Vijayapura | ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲಿಸಿದ ಡಿಸಿ ಟಿ.ಭೂಬಾಲನ್

ವಿಜಯಪುರ: ವಿಜಯಪುರದ ನಗರದ ಹೊರವಲಯದ ಬುರಾಣಪುರ ಹತ್ತಿರ ನಿರ್ಮಿಸಲಾಗುತ್ತಿರುವ ವಿಜಯಪುರ ವಿಮಾನ ನಿಲ್ದಾಣ ಕಾಮಗಾರಿ ಸ್ಥಳಕ್ಕೆ ಜಿಲ್ಲಾಧಿಕಾರಿ ಟಿ. ಭೂಬಾಲನ್ ಅವರು ಭೇಟಿ ನೀಡಿ ಕಾಮಗಾರಿಗಳ ಪರಿಶೀಲನೆ ನಡೆಸಿದರು.

ವಿಜಯಪುರ ವಿಮಾನ ನಿಲ್ದಾಣ ರನ್ವೇ ಕಾಮಗಾರಿ ಸಂಪೂರ್ಣ ಪೂರ್ಣಗೊಂಡಿದ್ದು, ಬಾಕಿ ಇರುವ ರನ್ ವೇ ಮಾರ್ಕಿಂಗ್ ಕಾಮಗಾರಿ ಶೀಘ್ರವೇ ಪೂರ್ಣಗೊಳಿಸಬೇಕು. ಟರ್ಮಿನಲ್ ಕಟ್ಟಡದಲ್ಲಿ ಅಳವಡಿಸಲಾದ ಇಲೆಕ್ಟ್ರಾನಿಕ್ ಉಪಕರಣಗಳು ಹಾಗೂ ಟರ್ಮಿನಲ್ ಕಟ್ಟಡ ಬಣ್ಣ ಹಚ್ಚುವ ಕಾಮಗಾರಿಯನ್ನು ವೀಕ್ಷಿಸಿದ ಅವರು, ರಾಷ್ಟ್ರೀಯ ಹೆದ್ದಾರಿಯಿಂದ ವಿಮಾನ ನಿಲ್ದಾಣಕ್ಕೆ ಕೂಡುವ ರಸ್ತೆ ನಿರ್ಮಾಣಕ್ಕೆ ಜಾಗ ಗುರುತಿಸುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಉಪವಿಭಾಗಾಧಿಕಾರಿ ಬಸವಣೆಪ್ಪ ಕಲಶೆಟ್ಟಿ, ತಹಶೀಲ್ದಾರ ಶ್ರೀಮತಿ ಕವಿತಾ, ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಎಂ.ಎಂ.ಪಾಟೀಲ, ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್.ಎಸ್.ಆಲೂರ ಹಾಗೂ ಶರವಣನ್ ಉಪಸ್ಥಿತರಿದ್ದರು.

Latest Indian news

Popular Stories