ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಸಿಲುಕಿಕೊಂಡ 10ಕ್ಕೂ ಹೆಚ್ಚು ಕಾರ್ಮಿಕರು

ವಿಜಯಪುರ: ಮೆಕ್ಕೆ ಜೋಳ ಮೂಟೆ ತುಂಬುವ ಯಂತ್ರ ಕುಸಿದು ಅದರಡಿ 10ಕ್ಕೂ ಹೆಚ್ಚು ಕಾರ್ಮಿಕರು ಸಿಲುಕಿಕೊಂಡಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ವಿಜಯಪುರದ ಕೈಗಾರಿಕಾ ಪ್ರದೇಶದಲ್ಲಿರುವ ರಾಜಗುರು ಇಂಡಸ್ಟ್ರೀಜ್‌ನ ಗೋದಾಮಿನಲ್ಲಿ ಘಟನೆ ನಡೆದಿದ್ದು ಘಟನೆಯಲ್ಲಿ ಸಿಲುಕಿಕೊಂಡಿರುವ ಕಾರ್ಮಿಕರನ್ನು ಬೀಹಾರ ಮೂಲದವರು ಎನ್ನಲಾಗಿದೆ. ಕಳೆದ ಹಲವು ವರ್ಷಗಳಿಂದ ಇದೇ ಇಂಡಸ್ಟ್ರೀಜ್‍ನಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.
ಮೆಕ್ಕೆಜೋಳದ ಮೂಟೆಗಳು ಬಿದ್ದು ಕಾರ್ಮಿಕರು ಸಿಲುಕಿರುವ ಶಂಕೆ ವ್ಯಕ್ತವಾಗಿದ್ದು, 4 ಜೆಸಿಬಿಗಳ ಮೂಲಕ ಕಾರ್ಮಿಕರ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿದೆ. ಸ್ಥಳಕ್ಕೆ ಎಸ್‍ಪಿ, ಋಷಿಕೇಶ ಸೋನೆವಣೆ ಭೇಟಿ ನೀಡಿ ಪರಿಶೀಲನೆ ಮಾಡಿದ್ದು, ಎಪಿಎಂಸಿ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ನಾಲ್ಕು ಜೆಸಿಬಿಗಳಿಂದ ಕಳೆದ ಎರಡು ಗಂಟೆಗಳಿಂದ ನಿರಂತರ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸಾಥ್ ನೀಡಿದ್ದಾರೆ.

Latest Indian news

Popular Stories