ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟವನ್ನು ಫೆ.29 ಹಾಗೂ ಮಾರ್ಚ್ 01 ರಂದು ಮತ್ತು ಮಾರ್ಚ್ 02 ರಂದು ಸಾಂಸ್ಕೃತಿಕ ಸ್ಪರ್ಧೆಗಳನ್ನು ನಗರದ ಡಾ. ಬಿ.ಆರ್ ಅಂಬೇಡ್ಕರ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಈ ಕ್ರೀಡಾಕೂಟದಲ್ಲಿ ಪುರುಷರು ಹಾಗೂ ಮಹಿಳೆಯರಿಗಾಗಿ ಫುಟಬಾಲ್, ವ್ಹಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ್ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್ ಬಾಲ್, ಚೆಸ್, ಟೆನ್ನಿಕ್ವಾಯಿಟ್, ಥ್ರೋಬಾಲ್, ಈಜು, ಭಾರ ಎತ್ತುವುದು ಕ್ರೀಡೆಗಳು ಹಾಗೂ ಹಿಂದೂಸ್ತಾನಿ ಸಂಗೀತ, ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಸಂಗೀತ,ಜಾನಪದ ಗೀತೆ ಕಥಕ್, ಮಣಿಪುರಿ, ಕೂಚುಪುಡಿ, ಕಥಕ್ಕಳಿ, ಓಡಿಸ್ಸಿ, ಭರತ ನಾಟ್ಯ, ಜಾನಪದ ನೃತ್ಯ(ತಂಡ), ವಿಂಡ್ ವಾದ್ಯಗಳು, ಪರಕೇಶನ್ ವಾದ್ಯಗಳು, ಕರಕುಶಲ ವಸ್ತುಗಳ ಪ್ರದರ್ಶನ, ಕಿರುನಾಟಕ ಸ್ಪರ್ಧೆಗಳನ್ನು ಆಯೋಜಿಸಲಾಗುವುದು.
ಕ್ರೀಡಾಕೂಟದಲ್ಲಿ ಭಾಗವಹಿಸಲಿಚ್ಛಿಸುವ ರಾಜ್ಯ ಸರ್ಕಾರಿ ನೌಕರರು ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣ ವಿಜಯಪುರ ಇವರಲ್ಲಿ ಭಾಗವಹಿಸುವ ಕ್ರೀಡೆಯೊಂದಿಗೆ ಇಲಾಖಾ ಮುಖಸ್ಥರ ಶಿಫಾರಸ್ಸಿನೊಂದಿಗೆ ದಿನಾಂಕ : 28-02-2024ರೊಳಗೆ ನೋಂದಾಯಿಸಿಕೊಳ್ಳಬೇಕು.
ಕ್ರೀಡಾ ಸ್ಪರ್ಧೆಯಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ನೌಕರರಿಗೆ ಹಾಜರಾತಿ ಪ್ರಮಾಣ ಪತ್ರ ಸಲ್ಲಿಸಿದ್ದಲ್ಲಿ ವಿಶೇಷ ಸಾಂದರ್ಭಿಕ ರಜೆ ಪಡೆಯಲು ಅರ್ಹರಾಗಿರುತ್ತಾರೆ. ಕ್ರೀಡಾಕೂಟದಲ್ಲಿ ಭಾಗವಹಿಸುವ ನೌಕರರು ಕೇಂದ್ರ ಸ್ಥಾನದಿಂದ ಆಯ್ಕೆ ನಡೆಯುವ ಸ್ಥಳಕ್ಕೆ ಹೋಗಿ ಬರುವ ಪ್ರಯಾಣಕ್ಕೆ ಎರಡನೇ ದರ್ಜೆ ರೈಲಿನ ಅಥವಾ ಎಕ್ಸಪ್ರೆಸ್ ಬಸ್ ದರವನ್ನು ಪ್ರಯಾಣ ಭತ್ಯೆಯನ್ನು ಪಡೆಯಬಹುದಾಗಿದೆ. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ದೂ:08352-251085, ಮೊ: 8792185141 ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.