Vijayapura | ಸೈಕ್ಲಿಂಗ್ ವೆಲೊಡ್ರೊಮ್ ಕಾಮಗಾರಿ ಪರಿಶೀಲನೆ

ವಿಜಯಪುರ: ವಿಜಯಪುರ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ವಿಜಯಪುರ ನಗರ ವ್ಯಾಪ್ತಿಯ ಭೂತನಾಳ ಗ್ರಾಮದ ಹತ್ತಿರ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಡಿ ನಿರ್ಮಾಣವಾಗಿರುವ ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿ ಮತ್ತು ನಿರ್ಮಿತಿ ಕೇಂದ್ರದಡಿ ನಿರ್ಮಾಣದ ವಸತಿ (ಡಾರ್ಮಿಟರಿ) ಕಾಮಗಾರಿಯನ್ನು ಪರಿಶೀಲನೆ ನಡೆಸಿದರು.

ಸೈಕ್ಲಿಂಗ್ ವೆಲೋಡ್ರೊಮ್ ಕಾಮಗಾರಿಯನ್ನು ಸಂಪೂರ್ಣ ಪರಿಶೀಲನೆ ನಡೆಸಿ, ಈ ಕಾಮಗಾರಿ ಈಗಾಗಲೇ ವಿಳಂಬವಾಗಿದ್ದು, ಬೇಗ ಪೂರ್ಣಗೊಳಿಸಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ತಾಂತ್ರಿಕ ಅಧಿಕಾರಿಗಳಿಗೆ ಹಾಗೂ ನಿರ್ಮಿತಿ ಕೇಂದ್ರದ ವ್ಯವಸ್ಥಾಪಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ವಿಜಯಪುರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಾದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಕೆ. ಹೊಂಗಯ್ಯ, ಬಾಸ್ಕೆಟ್ ಬಾಲ್ ಕೋಚ್ ಮಲ್ಲನಗೌಡ ಪಾಟೀಲ, ಸೈಕ್ಲಿಂಗ್ ಕೋಚ್ ಅಲಕಾ ಫಡತರೆ, ಅನಂತ ದೇಸಾಯಿ, ಎಸ್.ಬಿ ಕಡಕಲ್ ಸೇರಿದಂತೆ ಅಧಿಕಾರಿಗಳು ಉಪಸ್ಥಿತರಿದ್ದರು.

Latest Indian news

Popular Stories