ಲೋಕಸಭಾ ಚುನಾವಣೆ: ಮೇ .5 ರಿಂದ 7 ರವರೆಗೆ ಕಲಂ 144 ಜಾರಿ

ವಿಜಯಪುರ: ಲೋಕಸಭಾ ಸಾರ್ವತ್ರಿಕ ಚುನಾವಣೆ 2024ರ ಮತದಾನವು ಮೆ.7ರಂದು ನಡೆಯಲಿದ್ದು, ಜಿಲ್ಲೆಯ ಎಲ್ಲಾ 2085 ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ಸಲುವಾಗಿ ಮೇ 5 ರಿಂದ 7 ರವರೆಗೆ ಮತದಾನ ಮುಕ್ತಾಯವಾಗುವರೆಗೂ ಜಿಲ್ಲೆಯಲ್ಲಿ ಸೆಕ್ಷನ್ 144 ರ ಪ್ರತಿಭಂದಕಾಜ್ಞೆ ಜಾರಿ ಮಾಡಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ. ಭೂಬಾಲನ್ ಆದೇಶ ಹೊರಡಿಸಿದ್ದಾರೆ.
ಮೇ 5 ರಿಂದ ಮೇ 7 ರಂದು ಮತದಾನ ಮುಗಿಯವವರೆಗೂ 5 ಕ್ಕಿಂತ ಹೆಚ್ಚು ಜನರು ಗುಂಪು ಗುಂಪು ಸೇರುವುದು, ಮೆರವಣಿಗೆ, ಸಭೆ ಸಮಾರಂಭ ಜರುಗಿಸುವುದು ನಿಷೇಧಿಸಿದೆ. ಅದಲ್ಲದೇ, ಶಸ್ತ್ರಾಸ್ತ್ರಗಳನ್ನು ತೆಗೆದುಕೊಂಡು ಸಂಚರಿಸುವುದು, ಮತಗಟ್ಟೆಗಳ 100 ಮೀಟರ್ ಸುತ್ತಮುತ್ತ ರಾಜಕೀಯ ಪಕ್ಷಗಳ ಪೋಸ್ಟರ್, ಬ್ಯಾನರ್ ಹಾಗೂ ಪ್ರಚಾರ, ಸಾರ್ವಜನಿಕವಾಗಿ ಪ್ರಚೋಧನಕಾರಿ ಹೇಳಿಕೆ, ವ್ಯಕ್ತಿಗಳ ತೇಜೋವಧೆ ಮಾಡುವುದು, ಮತಗಟ್ಟೆಯ ಸುತ್ತಮುತ್ತ ಧ್ವನಿವರ್ಧಕಗಳನ್ನು ಬಳಸುವುದಕ್ಕೆ ನಿರ್ಬಂದವಿರುತ್ತದೆ ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

ಸಂತೆ, ಜಾತ್ರೆ, ಉತ್ಸವ ನಿಷೇಧ:
ಇನ್ನು ಜಿಲ್ಲೆಯ ಎಲ್ಲಾ 2085 ಮತಗಟ್ಟೆಗಳಲ್ಲಿ ಮುಕ್ತ, ಶಾಂತಿಯುತ ಹಾಗೂ ಪಾರದರ್ಶಕವಾಗಿ ಚುನಾವಣೆ ನಡೆಸುವ ದೃಷ್ಟಿಯಿಂದ ಮತದಾನದ ಹಿಂದಿನ ದಿನ ಮೇ 6 ಹಾಗೂ ಮತದಾನ ದಿನವಾದ ಮೇ 7 ರಂದು ಜಿಲ್ಲೆಯಾದ್ಯಂತ ಸಂತೆ, ಜಾತ್ರೆ, ಉತ್ಸವಗಳನ್ನು ನಿಷೇಧಿಸಿ ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿಯಾದ ಟಿ. ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

ವಿಜಯಪುರ ಲೋಕಸಭಾ ಕ್ಷೇತ್ರ : ನಾಮಪತ್ರ ಸಲ್ಲಿಕೆ ಮುಕ್ತಾಯ: 21 ಅಭ್ಯರ್ಥಿಗಳಿಂದ 35 ನಾಮಪತ್ರ ಸಲ್ಲಿಕೆ

ವಿಜಯಪುರ : ವಿಜಯಪುರ ಮೀಸಲು ಲೋಕಸಭೆ ಮತಕ್ಷೇತ್ರದಲ್ಲಿ ಆರನೇಯ ಮತ್ತು ಕೊನೆಯ ದಿನವಾದ ಶುಕ್ರವಾರದಂದು ಒಟ್ಟು 9 ಅಭ್ಯರ್ಥಿಗಳು 10 ನಾಮಪತ್ರ ಸಲ್ಲಿಸಿದ್ದಾರೆ. ಎ.12 ರಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು ಇಲ್ಲಿಯವರೆಗೆ 21 ಅಭ್ಯರ್ಥಿಗಳಿಂದ 35 ನಾಮಪತ್ರಗಳು ಸಲ್ಲಿಕೆಯಾಗಿವೆ.


ಕೊನೆಯ ದಿನದಂದು ಭಾರತೀಯ ಜನತಾ ಪಕ್ಷದ ಅಭ್ಯರ್ಥಿಯಾಗಿ ರಮೇಶ ಜಿಗಜಿಣಗಿ ಎರಡು ನಾಮಪತ್ರ, ಎಸ್ಯುಸಿಐ ಪಕ್ಷದ ಅಭ್ಯರ್ಥಿಯಾಗಿ ನಾಗಜ್ಯೋತಿ ಬಿ.ಎನ್ ಅವರು ಒಂದು, ಭಾರತೀಯ ಜವಾನ್ ಕಿಸಾನ್ ಪಕ್ಷದ ಅಭ್ಯರ್ಥಿಯಾಗಿ ಕುಲಪ್ಪಾ ಚವ್ಹಾಣ ಒಂದು, ಭಾರತೀಯ ಜನ ಸಾಮ್ರಾಟ್ ಪಕ್ಷದ ಆಭ್ಯರ್ಥಿಯಾಗಿ ತಾರಾಬಾಯಿ ಭೋವಿ ಒಂದು, ಪಕ್ಷೇತರ ಅಭ್ಯರ್ಥಿಯಾಗಿ ಸೋಮಶೇಖರ ಭಾವಿಕಟ್ಟಿ ಒಂದು, ನ್ಯಾಷನಲ್ ಲೋಕತಂತ್ರ ಪಕ್ಷದ ಅಭ್ಯರ್ಥಿಯಾಗಿ ರಾಜು ಪವಾರ್ ಅವರು ಒಂದು, ನಕ್ಕಿ ಭಾರತೀಯ ಏಕತಾ ಪಕ್ಷದ ಅಭ್ಯರ್ಥಿಯಾಗಿ ರಾಮಾಜಿ ಯಮನಪ್ಪ ಹರಿಜನ ಉರ್ಫ ಬುಧ್ಧಪ್ರಿಯ ಒಂದು, ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಕಲ್ಲಪ್ಪ ತೊರವಿ ಒಂದು ನಾಮಪತ್ರ ಹಾಗೂ ಪಕ್ಷೇತರ ಅಭ್ಯರ್ಥಿಯಾಗಿ ಸಂಗಪ್ಪ ಚಂದು ಲಮಾಣಿ ಒಂದು ನಾಮಪತ್ರ ಸಲ್ಲಿಸುವ ಮೂಲಕ ಕೊನೆಯ ದಿನದಂದು ಹತ್ತು ನಾಮಪತ್ರಗಳು ಸಲ್ಲಿಕೆಯಾಗಿವೆ ಎಂದು ಜಿಲ್ಲಾಡಳಿತ ಮಾಹಿತಿ ನೀಡಿದೆ.

Latest Indian news

Popular Stories